ಬಿಹಾರದ ಸಿಎಂ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆ-Protest in Shivamogga against Bihar CM

SUDDILIVE || SHIVAMOGGA

ಬಿಹಾರದ ಸಿಎಂ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆ-Protest in Shivamogga against Bihar CM   

Bihar, CM

ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಶಿವಮೊಗ್ಗದಲ್ಲಿ ಆಕ್ರೋಶ ವ್ಯಕ್ತವಾಗಿದೆ. ವೈದ್ಯೆಯೊಬ್ಬರ ಹಿಜಾಬ್ ಎಳೆದಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಶಿವಮೊಗ್ಗ ಡಿಸಿ ಕಚೇರಿ ಮುಂಭಾಗ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಕಾರ್ಯಕರ್ತರಿಂದ ಪ್ರತಿಭಟನೆ ನಡೆದು ಡಿಸಿಗೆ ಮನವಿ ಸಲ್ಲಿಸಲಾಗಿದೆ. 

ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಸಿಎಂ ನಿತೀಶ್ ಕುಮಾರ್ ಆಯುಷ್ ಮಹಿಳಾ ವೈದ್ಯರ ಪ್ರಮಾಣ ಪತ್ರ ವಿತರಣೆ ಸಂದರ್ಭದಲ್ಲಿ ಮಹಿಳೆಯ ಧಾರ್ಮಿಕ ವಸ್ತ್ರವಾದ ಹಿಜಾಬ್ ನ್ನು ಎಳೆದಿದ್ದಾರೆ. ಸಾರ್ವಜನಿಕ ವೇದಿಕೆಯಲ್ಲಿ ಎಳೆದು ಅವಮಾನಿಸಿದ್ದಾರೆಂದು ಆಕ್ರೋಶ ವ್ಯಕ್ತವಾಗಿದ್ದು ಘಟನೆಗೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿದೆ. 

ಸರ್ಕಾರದ ಅಧಿಕೃತ ಕಾರ್ಯಕ್ರಮದಲ್ಲಿ, ಸಾರ್ವಜನಿಕ ವೇದಿಕೆಯಲ್ಲೇ ವೈದ್ಯೆಯ ಹಿಜಾಬ್ ನ್ನು ಎಳೆದಿದ್ದಾರೆಂದು ಧಾರ್ಮಿಕ ವಸ್ತ್ರ ಹಿಜಾಬ್ ಗೆ ಅವಮಾನಿಸಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.  ಈ ಘಟನೆ ದೇಶಾದ್ಯಂತ ತೀವ್ರ ಆಕ್ರೋಶ ಮತ್ತು ಆತಂಕವನ್ನುಂಟುಮಾಡಿದೆ. ಈ ಕೃತ್ಯವು ಭಾರತ ಸಂವಿಧಾನದ ಕಲಂ 14, 15, 21 ಮತ್ತು 25ಗಳಿಗೆ ವಿರುದ್ಧವಾಗಿದೆ. ಮಹಿಳೆಯ ಗೌರವ, ಸ್ವಾತಂತ್ರ್ಯ ಹಾಗೂ ಧಾರ್ಮಿಕ ಹಕ್ಕುಗಳ ಮೇಲಿನ ಗಂಭೀರ ದಾಳಿಯಾಗಿದೆ ಎಂದು ಆರೋಪ

ಒಬ್ಬ ಮುಖ್ಯಮಂತ್ರಿ ಎಂಬ ಸಂವಿಧಾನಾತ್ಮಕ ಹುದ್ದೆಯಲ್ಲಿರುವ ವ್ಯಕ್ತಿಯಿಂದ ಇಂತಹ ನಡೆ ನಡೆದಿದೆ ಎಂದು ಖಂಡನೆ ಮಹಿಳೆಯ ದೇಹ, ವಸ್ತ್ರ ಮತ್ತು ಧಾರ್ಮಿಕ ನಂಬಿಕೆಗಳ ಮೇಲೆ ಕೈ ಹಾಕುವ ಯಾವುದೇ ವ್ಯಕ್ತಿ ಕಾನೂನಿನ ಮುಂದೆ ಉತ್ತರದಾಯಿಯಾಗಲೇಬೇಕು. ವೈದ್ಯೆ ಮಹಿಳೆಗೆ ಸಾರ್ವಜನಿಕ ಕ್ಷಮೆಯಾಚನೆಗೆ ಸೂಚಿಸಬೇಕೆಂದು ಮನವಿ ಅಲ್ಲದೇ ಸಂವಿಧಾನ ಉಲ್ಲಂಘನೆಯ ಹಿನ್ನೆಲೆಯಲ್ಲಿ ಅಗತ್ಯ ಕಾನೂನು ಕ್ರಮಕ್ಕೆ ಶಿಫಾರಸು ಮಾಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

Protest in Shivamogga against Bihar CM

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close