ಲೈಂಗಿಕ ದೌರ್ಜನ್ಯ ನೀಡಿದವನಿಗೆ ಶಿಕ್ಷೆ -Punishment for the accused

SUDDILIVE || SHIVAMOGGA

ಲೈಂಗಿಕ ದೌರ್ಜನ್ಯ ನೀಡಿದವನಿಗೆ ಶಿಕ್ಷೆ -Punishment for the accused 

Punishment, accussed

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 21 ವರ್ಷದ ಯುವಕ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ನ್ಯಾಯಾಲಯದಲ್ಲಿ ಸಾಬೀತಾಗಿದ್ದು ಘನ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC-1 ಶಿವಮೊಗ್ಗ ಆರೋಪಿಗೆ 30 ವರ್ಷ ಕಠಿಣ ಶಿಕ್ಷೆ ಮತ್ತು ದಙಡವಿಧಿಸಿ ತೀರ್ಪು ನೀಡಿದೆ. 

2023ನೇ ಸಾಲಿನಲ್ಲಿ, 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 21 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನು  ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ. 

ತನಿಖಾಧಿಕಾರಿಗಳಾದ ಶ್ರೀಶೈಲ ಕುಮಾರ ಜೆ. ಸಿಪಿಐ ಭದ್ರಾವತಿ ನಗರ ವೃತ್ತ ರವರು ಸದರಿ ಪ್ರಕರಣದ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ. 

ಸರ್ಕಾರದ ಪರವಾಗಿ  ಶ್ರೀಧರ್ ಸರ್ಕಾರಿ ಅಭೀಯೋಜಕರವರು ವಾದ ಮಂಡಿಸಿರುತ್ತಾರೆ. ಘನ ನ್ಯಾಯಾಲಯದಲ್ಲಿ ಆರೋಪಿತನ ವಿರುದ್ಧ ಆರೋಪವು ಧೃಡಪಟ್ಟ ಹಿನ್ನೆಲೆಯಲ್ಲಿ ಘನ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC-1 ಶಿವಮೊಗ್ಗ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ರವರು ಆರೋಪಿತನಿಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1,85,000/- ರೂ ದಂಡ ವಿಧಿಸಿ ಆದೇಶಿಸಿರುತ್ತಾರೆ.

Punishment for the accused 


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close