FSSAI ಗೇ ಸೂಕ್ತ ಸಿಬ್ಬಂದಿಗಳು ಮತ್ತು ಅಧಿಕಾರಿಗಳನ್ನ ನೇಮಿಸುವಂತೆ ಮನವಿ- Request to FSSAI to appoint appropriate staff and officers

 SUDDILIVE || SHIVAMOGGA

FSSAI ಗೇ ಸೂಕ್ತ ಸಿಬ್ಬಂದಿಗಳು ಮತ್ತು ಅಧಿಕಾರಿಗಳನ್ನ ನೇಮಿಸುವಂತೆ ಮನವಿ- Request to FSSAI to appoint appropriate staff and officers   

FSSAI, appoint


ಶಿವಮೊಗ್ಗ ನಗರ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ FSSAI ಪರವಾನಿಗೆಗಳನ್ನು ನೀಡಲು ಅಗತ್ಯ ಸಂಖ್ಯೆಯ ಅಧಿಕಾರಿಗಳನ್ನು ನೇಮಿಸಿ, ಪ್ರಕ್ರಿಯೆಯನ್ನು ಸುಗಮಗೊಳಿಸುವಂತೆ ಶಿವಮೊಗ್ಗ ಪೀಸ್ ಆರ್ಗನೈಜೇಷನ್ ಡಿಸಿ ಮೂಲಕ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರಕ್ಕೆ ಮನವಿ ಮಾಡಿದೆ.  

ಶಿವಮೊಗ್ಗ ನಗರ ಹಾಗೂ ಶಿವಮೊಗ್ಗ ತಾಲ್ಲೂಕಿನ ಹಲವು ಪ್ರದೇಶಗಳಲ್ಲಿ ನಿಯೋಜಿತ FSSAI ಅಧಿಕಾರಿಗಳ ಕೊರತೆ ಹಾಗೂ ಲಭ್ಯತೆ ಇಲ್ಲದಿರುವುದರಿಂದ ಸಣ್ಣ ವ್ಯಾಪಾರಿಗಳು, ಆಹಾರ ಉತ್ಪಾದಕರು ಮತ್ತು ಉದ್ಯಮಿಗಳು ತೀವ್ರ ಅಸೌಕರ್ಯವನ್ನು ಎದುರಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳ ಅನುಪಸ್ಥಿತಿಯಿಂದಾಗಿ FSSAI ಪರವಾನಿಗೆ ಪಡೆಯುವ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆಯಡಿ ಕಾನೂನಾತ್ಮಕವಾಗಿ ಆಹಾರ ಸಂಬಂಧಿತ ವ್ಯವಹಾರ ನಡೆಸಲು ಅಡ್ಡಿ ಉಂಟಾಗುತ್ತಿದೆ ಎಂದು ಸಂಘಟನೆ ಮನವಿಯಲ್ಲಿ ಆರೋಪಿಸಿದೆ.

ಶಿವಮೊಗ್ಗ ನಗರ ಮತ್ತು ತಾಲ್ಲೂಕು ಮಟ್ಟದಲ್ಲಿ ಅಗತ್ಯ ಸಂಖ್ಯೆಯ FSSAI ಅಧಿಕಾರಿಗಳನ್ನು ನೇಮಿಸುವುದು, FSSAI ಪರವಾನಿಗೆ ಅರ್ಜಿಗಳ ಪರಿಶೀಲನೆ ಹಾಗೂ ಅನುಮೋದನೆ ಪ್ರಕ್ರಿಯೆಯನ್ನು ಸಮಯಬದ್ಧವಾಗಿ ನಡೆಸುವ ವ್ಯವಸ್ಥೆ ಕಲ್ಪಿಸುವುದು,

ಸಣ್ಣ ಆಹಾರ ಉದ್ಯಮಿಗಳು ಮತ್ತು ವ್ಯಾಪಾರಿಗಳಿಗೆ ಮಾರ್ಗದರ್ಶನ ನೀಡುವ ಸರಳ, ಪಾರದರ್ಶಕ ಹಾಗೂ ಸುಲಭವಾಗಿ ಲಭ್ಯವಾಗುವ ವ್ಯವಸ್ಥೆಯನ್ನು ಸ್ಥಾಪಿಸುವುದು.ಈ ಸಾರ್ವಜನಿಕ ಹಿತಾಸಕ್ತಿಯ ಮನವಿಯನ್ನು ತಾವುಗಳು ಸಹಾನುಭೂತಿಯಿಂದ ಪರಿಗಣಿಸಿ, ಶೀಘ್ರವಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪೀಸ್ ಆರ್ಗನೈಜೇಷನ್ ನ ರಿಯಾಜ್ ಮನವಿಯಲ್ಲಿ ಮನವಿ ಮಾಡಿದ್ದಾರೆ. 

Request to FSSAI to appoint appropriate staff and officers

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close