SUDDILIVE || SHIVAMOGGA
ಲೈಂಗಿಕ ದೌರ್ಜನ್ಯ ಎಸೆಗಿದವನಿಗೆ 20 ವರ್ಷ ಕಠಿಣ ಸಜೆ-Sexual assault accused gets 20 years in prison
ಅಪ್ರಪ್ತಳಿಗೆ ಲೈಂಗಿಕ ದೌರ್ಜನ್ಯ ನೀಡಿದ 26 ವರ್ಷದ ಆರೋಪಿಗೆ ಇಲ್ಲಿನ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1,00,000/- ರೂ ದಂಡ ವಿಧಿಸಿ ತೀರ್ಪು ನೀಡಿದೆ.
2023ನೇ ಸಾಲಿನಲ್ಲಿ, 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 26 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನು ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಪ್ರಕರಣ ದಾಖಲಾಗಿತ್ತು.
ಆಗಿನ ತನಿಖಾಧಿಕಾರಿಗಳಾದ ಮಂಜುನಾಥ್ ಬಿ ಪಿಐ ತುಂಗಾನಗರ ಪೊಲೀಸ್ ಠಾಣೆ ರವರು ಸದರಿ ಪ್ರಕರಣದ ತನಿಖೆ ಪೂರೈಸಿ, ಆರೋಪಿ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.
ಸರ್ಕಾರದ ಪರವಾಗಿ ಶ್ರೀಧರ್ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿರುತ್ತಾರೆ. ಘನ ನ್ಯಾಯಾಲಯದಲ್ಲಿ ಆರೋಪಿತನ ವಿರುದ್ಧ ಆರೋಪವು ಧೃಡಪಟ್ಟ ಹಿನ್ನೆಲೆಯಲ್ಲಿ ಘನ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC 1ಶಿವಮೊಗ್ಗ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ರವರು ಆರೋಪಿತನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1,00,000/- ರೂ ದಂಡ, ದಂಡ ಕಟ್ಟಲು ವಿಫಲ ನಾದಲ್ಲಿ, 2 ವರ್ಷ ಸಾದಾ ಕಾರಾವಾಸ ಶಿಕ್ಷೆ ವಿಧಿಸಿದ್ದು, ದಂಡದ ಮೊತ್ತದಲ್ಲಿ, ನೊಂದ ಬಾಲಕಿಗೆ 75,000/- ಹಾಗೂ ಸರ್ಕಾರದಿಂದ 4,00,000/- ರೂ ಪರಿಹಾರ ನೀಡಲು ಆದೇಶಿಸಿರುತ್ತಾರೆ.
Sexual assault accused gets 20 years in prison
