SUDDILIVE || SHIVAMOGGA
ಸಿಎಂ ಸಿದ್ದರಾಮಯ್ಯನವರ ವಿರುದ್ಧ ನಗರ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ- Urban BJP Mahila Morcha protests against CM Siddaramaiah
ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಅವರ ಬಗ್ಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಏಕವಚನ ಹಾಗೂ ಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಬಿಜೆಪಿ ನಗರ ಮಹಿಳಾ ಮೋರ್ಚಾ ಇಂದು ಜಿಲ್ಲಾಧಿಕಾರಿಗಳ ಕಚೇರಿಯದರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು.
ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಸಾರ್ವಜನಿಕವಾಗಿ ನೀಡಿರುವ ಅತ್ಯಂತ ಸಂಸ್ಕೃತ ಮತ್ತು ಮಹಿಳಾ ವಿರೋಧಿ ಹೇಳಿಕೆಯನ್ನು ಸಂಘಟನೆ ತೀವ್ರವಾಗಿ ಖಂಡಿಸಿ ರಾಜಕೀಯ ಘನತೆಗೆ ಅಪಮಾನ ಮಾಡಿ ಕೇಂದ್ರ ಸಚಿವ ಸಂಪುಟದಲ್ಲಿ ಪ್ರಭಾವಿ ಹುದ್ದೆಯನ್ನು ಅಲಂಕರಿಸಿರುವ ದೇಶದ ಹಣಕಾಸು ನೀತಿಗಳನ್ನು ನಿರ್ಧರಿಸುವ ಪ್ರಮುಖ ಮಹಿಳಾ ನಾಯಕಿ ಯಾಗಿರುವ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳು ಪದೇಪದೇ ಏಕವಚನದಲ್ಲಿ ಹಾಗೂ ಹಗುರವಾಗಿ ಸಂಬೋಧಿಸಿರುವುದು ಸಂಸದೀಯ ಮೌಲ್ಯಗಳು ಮತ್ತು ಮಹಿಳೆಯರ ಘನತೆಗೆ ಹಾಡಿದ ನೇರ ಅಪಮಾನವಾಗಿದೆ ಎಂದು ಮನವಿಯಲ್ಲಿ ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆಯರನ್ನ ಅವಮಾನಿಸಿರುವ ಮುಖ್ಯಮಂತ್ರಿಗಳು ಸಾರ್ವಜನಿಕವಾಗಿ ಬೇಷರತ್ ಕ್ಷಮೆಯಾಚಿಸಬೇಕು. ಅಸಂಸ್ಕೃತ ಭಾಷ ಪ್ರಯೋಗಗಳನ್ನ ತಕ್ಷಣ ನಿಲ್ಲಿಸಬೇಕು. ಸಂವಿಧಾನಾತ್ಮಕ ಹುದ್ದೆಗಳಿಗೆ ಗೌರವ ನೀಡುವಂತೆ ಸೂಚನೆ ನೀಡಬೇಕು. ಮುಂದಿನದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕೆಂದು ಸಂಘಟನೆ ಮನವಿಯಲ್ಲಿ ಆಗ್ರಹಿಸಿದೆ.
ಮಹಿಳಾ ಮೋರ್ಚಾದ ನಗರಾಧ್ಯಕ್ಷೆ ರಶ್ಮೀ ಶ್ರೀನಿವಾಸ್, ಜಿಲ್ಲಾ ಕಾರ್ಯದರ್ಶಿ ಸುರೇಖಾ ಮುರುಳೀಧರ್, ಮಹಿಳಾ ಮೋರ್ಚಾದ ನಗರ ಪ್ರಧಾನ ಕಾರ್ಯದರ್ಶಿ ಯಶೋದ ವೈಷ್ಣವ್, ಶಾಂತಾ ಸುರೇಂದ್ರ ಮೊದಲಾದವರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.
Urban BJP Mahila Morcha protests against CM Siddaramaiah
