ಮರ್ಯಾದ ಹತ್ಯೆಗೆ ಕಠಿಣ ಕಾನೂನು ಜಾರಿಗೊಳಿಸಲು ಯುವ ಕಾಂಗ್ರೆಸ್ ಒತ್ತಾಯ-Youth Congress demands stricter law for honor killings

SUDDILIVE || SHIVAMOGGA

ಮರ್ಯಾದ ಹತ್ಯೆಗೆ ಕಠಿಣ ಕಾನೂನು ಜಾರಿಗೊಳಿಸಲು ಯುವ ಕಾಂಗ್ರೆಸ್ ಒತ್ತಾಯ-Youth Congress demands stricter law for honor killings    

Youth, congress



ಮರ್ಯಾದೆ ಗೇಡು ಹತ್ಯೆ ಪ್ರಕರಣ ಕಠಿಣ ಕಾನೂನು ಕಾಯಿದೆ ಜಾರಿಗೆ ಒತ್ತಾಯಿಸಿ ಶಿವಮೊಗ್ಗ ಯುವ ಕಾಂಗ್ರೆಸ್ ಜಿಲ್ಲಾಧಿಕಾರಿಗಳ ಮೀಲಕ ಸಿಎಂ ಸಿದ್ದರಾಮಯ್ಯನವರಿಗೆ  ಮನವಿ ಸಲ್ಲಿಸಿತು. 

ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದೆ ಗೇಡು ಹತ್ಯ ಪ್ರಕರಣ ಇಡೀ ನಾಗರಿಕ ಸಮಾಜ ತಲೆತಗ್ಗಿಸುವತ್ತಾಗಿದೆ. ಅನ್ಯ ಜಾತಿಯ ಹುಡುಗನನ್ನು ಮದುವೆಯಾಗಿದ್ದಾಳೆ. ಎಂದು ತಂದೆಯೇ ಮಗಳನ್ನು ಕೊಲೆ ಮಾಡಿರುವುದು ಅತ್ಯಂತ ಅಮಾನವೀಯ ಕೃತ್ಯ. ಆಧುನಿಕ ದಿನಗಳಲ್ಲೂ ಇಂಥ ಪ್ರಕರಣ ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರ ತಕ್ಷಣ, ಇನ್ನೆಲ್ಲೂ ಇಂಥ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಾನ್ಯಾ ಕೊಲೆ ಪ್ರಕರಣವನ್ನು ವಿಶೇಷವಾಗಿ ಪರಿಗಣಿಸಿ, ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು.

ನಾಗರಿಕ ಸಮಾಜಕ್ಕೆ ಮರ್ಯಾದೆಗೇಡು ಹತ್ಯೆ ಮಾರಕವಾಗಿದೆ‌. ತನ್ನದೇ ಸ್ವಂತ ಮಗಳನ್ನು ತಂದೆಯೊಬ್ಬ ಮೃಗೀಯವಾಗಿ ಕೊಂದಿದ್ದಾರೆ. ಇಂತಹ ಹೇಯ ಕೃತ್ಯವನ್ನ ಜಾತಿವಾದಿ ಸಮಾಜ ಸಮರ್ಥಿಸುತ್ತಿದೆ. ಜನಪ್ರತಿನಿಧಿಗಳು ಜಾತಿ ರಾಜಕಾರಣದಲ್ಲಿ ತೊಡಗಿದ್ದಾರೆ. ಜಾತಿ ದೌರ್ಜನ್ಯ, ಮರ್ಯಾದೆಗೇಡು ಹತ್ಯೆ ಹಾಗೂ ಜಾತೀಯತೆಯನ್ನು ತೊಡೆದು ಹಾಕಲು ಸರ್ಕಾರಗಳು ಬದ್ದತೆಯಿಂದ ಕೆಲಸ ಮಾಡಬೇಕು. ಜಾತಿ ವಿನಾಶಕ್ಕೆ ಅಂತರ್ಜಾತಿ ವಿವಾಹಗಳು ಮುಖ್ಯ. ಕುಟುಂಬಗಳನ್ನು ಎದುರು ಹಾಕಿಕೊಂಡು ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ಸರ್ಕಾರ ರಕ್ಷಣೆ ಒದಗಿಸಬೇಕು. ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾನೂನು ರೂಪಿಸಬೇಕು

“ಮರ್ಯಾದೆಯ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಹತ್ಯೆಗಳಲ್ಲಿ ಯಾವ ಗೌರವದ ವಿಚಾರವೂ ಇಲ್ಲ. ಇದೊಂದು ಜಾತಿಗ್ರಸ್ತ ಸಮಾಜ ಎಸಗುವ ಕ್ರೂರ ಕೊಲೆಯಷ್ಟೇ. ಈ ಹತ್ಯೆಗಳು ಜಾತಿ ಮತ್ತು ಪಿತೃಪ್ರಭುತ್ವ ಸಮಾಜದ ಸಾಧನಗಳಾಗಿವೆ. ಭಯ ಮತ್ತು ಭಯೋತ್ಪಾದನೆಯ ಮೂಲಕ ಜಾತಿ ವ್ಯವಸ್ಥೆಯನ್ನು ಹೇರುವ, ಮಹಿಳೆಯರ ದೇಹ ಮತ್ತು ಸ್ವಾತಂತ್ರ್ಯವನ್ನು ನಿಯಂತ್ರಿಸಲು ನಿರಂತರವಾಗಿ ಯತ್ನಿಸಲಾಗುತ್ತಿದೆ. ಸ್ವಂತ ಮಗಳ ಜೀವ ತೆಗೆಯುವುದು ಜಾತಿ ವ್ಯವಸ್ಥೆಯ ಕ್ರೌರ್ಯ. ಇಂತಹ ಕೃತ್ಯಗಳು ಸಂವಿಧಾನದ ಆಶಯವಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಮೂಲಭೂತ ಮೌಲ್ಯಗಳಿಗೆ ಹೊಡೆತ ನೀಡುತ್ತವೆ

“ಮರ್ಯಾದೆಗೇಡು ಹತ್ಯೆಗಳು ಕಠಿಣ ಶಿಕ್ಷೆಗೆ ಅರ್ಹವಾದ ಅನಾಗರಿಕ ಮತ್ತು ನಾಚಿಕೆಗೇಡಿನ ಕೊಲೆ ಕೃತ್ಯಗಳು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಜಾತಿ ವ್ಯವಸ್ಥೆಯು ಭಾರತಕ್ಕೆ ಎದುರಾಗಿರುವ ಶಾಪವಾಗಿದೆ. ಅಂತರ್ಜಾತಿ ವಿವಾಹಗಳು ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಂವಿಧಾನದ ಆಶಯವನ್ನು ಬಲಪಡಿಸುತ್ತವೆ ಎಂಬುದನ್ನು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ. ಮರ್ಯಾದೆಗೇಡು ಹತ್ಯೆಗಳು ಮತ್ತು ಜಾತಿ ದೌರ್ಜನ್ಯಗಳನ್ನು ತಡೆಗಟ್ಟಲು, ಪರಿಹಾರ ಕ್ರಮಗಳನ್ನು ರೂಪಿಸಲು ಹಾಗೂ ಶಿಕ್ಷಾರ್ಹ ಕ್ರಮಗಳನ್ನು ಜಾರಿಗೊಳಿಸಲು ನ್ಯಾಯಾಲಯವು ಸರ್ಕಾರಗಳಿಗೆ ಸೂಚನೆ ನೀಡಿದೆ. ಅದರಂತೆ ಮಾನ್ಯ ಮುಖ್ಯಮಂತ್ರಿಗಳು ಇಂತಹ ಪ್ರಕರಣಗಳು ಮುಂದೆ ರಾಜ್ಯದಲ್ಲಿ ಮತ್ತೆ ಆಗದಂತೆ ''ಕಠಿಣ ಕಾನೂನು ಕಾಯ್ದೆಯನ್ನು'' 'ಮಾನ್ಯ ಹೆಸರಲ್ಲಿ' ತರಬೇಕೆಂದು ಈ ಮೂಲಕ ಯುವ ಕಾಂಗ್ರೆಸ್ ಒತ್ತಾಯಿಸುತ್ತದೆ

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಜಿಲ್ಲಾ ಯುವ ಕಾಂಗ್ರೆಸ್ ನ ಹೆಚ್. ಪಿ.ಗಿರೀಶ್, ಜಿಲ್ಲಾ ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಬಿ ಲೋಕೇಶ್, ಎಸ್ ಕುಮಾರೇಶ್, ಇಟಿ ನಿತಿನ್ ,ವಿನಯ್ ತಾಂಡ್ಲೆ, ಎಸ್ ಬಸವರಾಜ್, ಮೋಹನ್ ಸೋಮಿನಕೊಪ್ಪ, ಕೆ ಎಲ್ ಪವನ್, ಕೇಶವ ಸೀಗೆಹಟ್ಟಿ, ಮಿಥುನ್, ಸಾಹಿಲ್, ಸುರೇಶ್, ಜಿ ಕಿರಣ್, ಸುಹಾಸ್, ನಿತಿನ್ , ವಿನ್ಯಾಸ್ ಗೆಡ್ಡೆ, ಸಮಿವುಲ್ಲಾ, ಸಂದೇಶ್, ಕಾರ್ತಿಕ್ ವಿಶಾಲ್ ಬೊಮ್ಮನಕಟ್ಟೆ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

Youth Congress demands stricter law for honor killings

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close