SUDDILIVE || SHIVAMOGGA
ಹೊಸನಗರದಲ್ಲಿ ಬಿಜೆಪಿ ಯಾವ ಕಾರ್ಯಕರ್ತನ ವಿರುದ್ಧ ದೂರು ದಾಖಲಿಸಿದ್ದಕ್ಕೆ ಪ್ರತಿಭಟಿಸಿದ್ದು?-BJP leaders' surprise protest in Hosanagar
ಸಂಸದರ ಪೇಸ್ ಬುಕ್ ಸೇರಿದಂತೆ ಎಲ್ಲಾ ಜಿಲ್ಲಾ ಬಿಜೆಪಿ ನಾಯಕರ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಕಾರ್ಯಕರ್ತ ಸುರೇಶ್ ಸ್ವಾಮಿ ರಾವ್ ಎಂದು ನಮೂದಿಸಲು ಸಾಧ್ಯವಾಗದ ಸ್ಥಿತಿಯಲ್ಲಿ ಬಿಜೆಪಿ ಇಂದು ಹೊಸನಗರದಲ್ಲಿ ಪ್ರತಿಭಟನೆ ನಡೆಸಿದೆಯಾ ಎಂದು ಅಚ್ಚರಿ ಮೂಡಿಸಿದೆ.
ಸುರೇಶ್ ಸ್ವಾಮಿರಾವ್ ವಿರುದ್ಧ ಸುಳ್ಳು ಪ್ರಕರಣ ದಾಖಲಾಗಿದ್ದು ಹೊಸನಗರ ಪೊಲೀಸ್ ಠಾಣೆಯ ಎಸ್ಐ ವಿರುದ್ಧವೇ ಬಿಜೆಪಿ ನಾಯಕರು ಇಂದು ಹೊಸನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸುರೇಶ್ ಅವರ ಹೆಸರನ್ನ ನಮೂದಿಸದೆ ಬಿಜೆಪಿ ಕಾರ್ಯಕರ್ತನ ವಿರುದ್ಧ ಸುಳ್ಳು ಪ್ರಕರಣವನ್ನ ದಾಖಲಿಸಲಗಿದೆ ಎಂದು ಉಲ್ಲೇಖಿಸಿ ಕಾರ್ಯಕರ್ತನ ಹೆಸರನ್ನೇ ಉಲ್ಲೇಖಿಸದಿರುವುದು ಅಚ್ಚರಿ ಮೂಡಿಸಿದೆ.
ಹೊಸನಗರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿರುವ ಸಬ್ ಇನ್‌ಸ್ಪೆಕ್ಟರ್ ಕ್ರಮವನ್ನು ಖಂಡಿಸಿ ಹಾಗೂ ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೊಸನಗರ ಬಿಜೆಪಿ ಮಂಡಲದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ ಎಂದು ಬಿಜೆಪಿ ನಾಯಕರ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡಿದೆ. ಪ್ರತಿಭಟನೆಯ ವೇಳೆ ಸುರೇಶ್ ಅವರ ಹೆಸರನ್ನ ನಾಯಕರು ಹೇಳಿರುವುದು ಸರಿಯೇ ಆದರೆ ಅವರ ಫೇಸ್ ಬುಕ್ ಮತ್ತು ಇನ್ನಿತರೆ ಸಾಮಾಜಿಕ ಜಾಲತಾಣದಲ್ಲಿ ಸುರೇಶ್ ಹೆಸರನ್ನೇ ಬಿಟ್ಟು ಬಿಜೆಪಿ ಕಾರ್ಯಕರ್ತನ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿರುವುದನ್ನ ಖಂಡಿಸಿ ಎಂದು ಪೋಸ್ಟ್ ಮಾಡಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಈ ಹೋರಾಟ ನ್ಯಾಯ ಸಿಗುವವರೆಗೂ ನಿಲ್ಲುವುದಿಲ್ಲ ಎಂದು ಬಿಜೆಪಿ ಹೇಳಿಕೊಂಡಿದೆ. ಈ ಸಂದರ್ಭದಲ್ಲಿ ಮಾಜಿ ಗೃಹ ಸಚಿವರು ಹಾಗೂ ತೀರ್ಥಹಳ್ಳಿ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ, ಶಿವಮೊಗ್ಗ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ, ಸಾಗರ ಮಾಜಿ ಶಾಸಕರಾದ ಶ್ರೀ ಹಾರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್ ಹಾಗೂ ಪ್ರಮುಖರು ಪ್ರತಿಭಟನೆಯಲ್ಲಿ ಉಪಸ್ಥಿತರಿದರು.
BJP leaders' surprise protest in Hosanagar
