ವಿಬಿಜಿ ರಾಮ್ ಜಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ- Congress protests against VBG Ram Ji

 SUDDILIVE || SHIVAMOGGA

ವಿಬಿಜಿ ರಾಮ್ ಜಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ- Congress protests against VBG Ram Ji    

Congress, protest


ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಹೆಸರನ್ನು ಬದಲಿಸಿ, ವಿಬಿಜಿ ರಾಮ್ ಜಿ ಎಂದು ಹೆಸರಿಟ್ಟಿರುವ ಕೇಂದ್ರ ಸರ್ಕಾರದ ವಿರುದ್ಧ ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್ ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿತು.

2005ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ 2005 ಅಡಿಯಲ್ಲಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ ಒದಗಿಸಲು ಗ್ರಾಮೀಣ ಪ್ರದೇಶದ ಕುಟುಂಬದ ಕೌಶಲ್ಯ ರಹಿತ ವಯಸ್ಕರ ಸದಸ್ಯರಿಗೆ ಕನಿಷ್ಠ ನೂರು ದಿನಗಳ ಉದ್ಯೋಗ ಒದಗಿಸುವ ಯೋಜನೆ ಯಾಗಿತ್ತು. ಇದರಲ್ಲಿ ಕೇಂದ್ರ ಸರ್ಕಾರದ ಶೇಕಡ 90ರಷ್ಟು ಹಣ ರಾಜ್ಯ ಸರ್ಕಾರದ ಹತ್ತರಷ್ಟು ಹಣ ವಿನಿಯೋಗವಾಗಿತ್ತು ಎಂದು ಪಕ್ಷ ಮನವಿಯಲ್ಲಿ ತಿಳಿಸಿದೆ.


ಮನರೇಗದಲ್ಲಿ 11 ಅಂಶಗಳ ಅನುಕೂಲಗಳ ಬಗ್ಗೆ ಪಕ್ಷ ಮನವಿಯಲ್ಲಿ ಸೂಚಿಸಿದ್ದು ಈಗಿನ ವಿವಿಜಿ ರಾಮ್ ಜಿ ಹೆಸರನ್ನ ನಾಮಕರಣ ಮಾಡಿ,  ಮಹಾತ್ಮ ಗಾಂಧೀಜಿಯವರ ಹೆಸರನ್ನು ಕೈ ಬಿಡಲಾಗಿದ್ದು ಇಡೀ ಯೋಜನೆಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸಲಿದೆ ಎಂದು ತಿಳಿಸಿದೆ.

ಈ ಯೋಜನೆ ಕೇಂದ್ರ ಸರ್ಕಾರದ ಅಣತಿಯಂತೆ ಅದರ ಮನಸ್ಸಿಗೆ ತೋಚಿದ ರೀತಿಯಲ್ಲಿ ಗ್ರಾಮೀಣದ ಪ್ರದೇಶಗಳಿಗೆ ಮಾತ್ರ ಅನ್ವಯವಾಗುತ್ತಿದೆ. ಯೋಜನೆಗಳನ್ನು ಕೇಂದ್ರ ಸರ್ಕಾರ ರೂಪಿಸುವ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅನ್ವಯ  ಗ್ರಾಮ ಪಂಚಾಯತಿಗಳು ರೂಪಿಸಬೇಕಿದೆ. ಇದು ಅಧಿಕಾರ ವಿಕೇಂದ್ರಿಕರಣ ಹಾಗೂ ಒಕ್ಕೂಟ ವ್ಯವಸ್ಥೆಯ ಮೇಲಿನ ಸರ್ಜಿಕಲ್ ಸ್ಟ್ರೈಕ್ ಎಂದು ಆಗ್ರಹಿಸಲಾಗಿದೆ

ಪ್ರತಿಭಟನೆಯಲ್ಲಿ ಕಲ್ಗೂಡು ರತ್ನಾಕರ್, ಎನ್ ರಮೇಶ್ ಮಹಿಳಾ ಜಿಲ್ಲಾಧ್ಯಕ್ಷೆ ಶ್ವೇತಾ ಬಂಡಿ ಮಾಜಿ ಕಾರ್ಪೊರೇಟರ್ ಯಮುನಾ ರಂಗೇಗೌಡ,  ಹೆಚ್ ಸಿ ಯೋಗೇಶ್, ದ.ಬ್ಲಾಕ್ ಅಧ್ಯಕ್ಷ ಶಿವಕುಮಾರ್, ಜವಳಿ ನಿಗಮದ ಅಧ್ಯಕ್ಷ ಚೇತನ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

Congress protests against VBG Ram Ji

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close