ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ-Engineering student succumbed to heart attack

 SUDDILIVE || SHIVAMOGGA

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ-Engineering student succumbed to heart attack    

Succumbed, student

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಬಲಿಯಾಗಿದ್ದಾನೆ. 21 ವರ್ಷದ ಯುವಕ ವಸತಿ ಗೃಹದ ಬಚ್ಚಲು ಮನೆಯಲ್ಲೇ ಕುಸಿದು ಬಿದ್ದಿದ್ದು ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ. 

ಗಣೇಶ್ ಎಂಬ ಬಳ್ಳಾರಿ ಮೂಲದ ಯುವಕ ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ಶಿವಮೊಗ್ಗದ ವಾಜಪೇಯಿ ಬಡಾವಣೆಯಲ್ಲಿರುವ ಮೆಟ್ರಿಕ್ ನಂತರದ ಹಾಸ್ಟೆಲ್ ನಲ್ಲಿ ವಾಸವಾಗಿದ್ದನು. ಇಂದು ಹಾಸ್ಟೆಲ್ ನ ಬಾತ್ ರೂಂಗೆ ಹೋದ ಯುವಕ ಕುಸಿದು ಬಿದ್ದಿದ್ದಾನೆ. 

ಆತನನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆದಲ್ಲಿ ಗಣೇಶ್ ನ ಪ್ರಾಣ ಪಕ್ಷಿ ಹಾರಿಹೋಗಿದೆ. 21 ವರ್ಷದ ಯುವಕ ಹೃದಯಾಘಾತಕ್ಕೆ ಬಲಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಗಣೇಶ್ 5 ನೇ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ. 

ಯುವ ಸಮೂಹದಲ್ಲಿ ಹೃದಯಾಘಾತ ಹೆಚ್ಚುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಇದೊಂದು ಆತಂಕಕಾರಿ ವಿಷಯವೂ ಆಗಿದೆ. ಜಿಲ್ಲೆಯಲ್ಲಿ ಹೃದಯಾಘಾತಕ್ಕೆ 2026 ನೇ ಇಸವಿಗೆ ಗಣೇಶ್ ಮೊದಲ ಬಲಿಯಾಗಿರುವುದಾಗಿ ಕೇಳಿ ಬರುತ್ತಿದೆ. 

Engineering student succumbed to heart attack

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close