ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ - ಇಬ್ಬರು ಗಂಭೀರ- Fatal accident between two bikes - two seriously injured

SUDDILIVE || RIPPENPETE

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ - ಇಬ್ಬರು ಗಂಭೀರ- Fatal accident between two bikes - two seriously injured   

Fatal, Accident

ಪಟ್ಟಣದ ಸಮೀಪದ ದೂನ ಪ್ರದೇಶದಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ದೂನ ಸಮೀಪದ ನರ್ಸರಿ ಮುಂಭಾಗದಲ್ಲಿ ಟಿವಿಎಸ್ ಎಕ್ಸೆಲ್ ಬೈಕ್ ಹಾಗೂ ಬಜಾಜ್ ಪಲ್ಸರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಟಿವಿಎಸ್ ಎಕ್ಸೆಲ್ ಬೈಕ್ ಸವಾರರಾದ ಗುಬ್ಬಿಗ ಗ್ರಾಮದ ಸತ್ಯನಾರಾಯಣ್ ಭಟ್ ಅವರಿಗೆ ತಲೆಗೆ ತೀವ್ರ ಪೆಟ್ಟು ಬಿದ್ದು ಭಾರೀ ರಕ್ತಸ್ರಾವವಾಗಿದೆ. ಇನ್ನೊಂದೆಡೆ ಪಲ್ಸರ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಹೊಸನಗರ ಸಮೀಪದ ಜಯನಗರ ನಿವಾಸಿ ರಾಕೇಶ್ (27) ಎಂಬಾತನಿಗೆ ಕಾಲು ಮುರಿತವಾಗಿದೆ ಎಂದು ತಿಳಿದುಬಂದಿದೆ.

ಘಟನೆ ನಡೆದ ತಕ್ಷಣ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ಮಾಹಿತಿ ಪಡೆದ ರಿಪ್ಪನ್‌ಪೇಟೆ ಪಿಎಸ್ಐ ರಾಜುರೆಡ್ಡಿ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

Fatal accident between two bikes - two seriously injured

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close