HOSANAGARA- ಚಿರತೆಯ ಮೃತದೇಹ ಪತ್ತೆ- HOSANAGARA- Body of leopard found

SUDDILIVE || HOSANAGARA

HOSANAGARA- ಚಿರತೆಯ ಮೃತದೇಹ ಪತ್ತೆ- HOSANAGARA- Body of leopard found

Hosanagara, Leopard


ತಾಲೂಕಿನ ಯಡೂರು ಗ್ರಾಮದಲ್ಲಿ ಶನಿವಾರ ಚಿರತೆಯ ಮೃತದೇಹ (Dead leopard) ಪತ್ತೆಯಾಗಿದೆ. ಬೆಳಗ್ಗೆ ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಯಡೂರು ಗ್ರಾಮದಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ.

ಮರಣೋತ್ತರ ಪರೀಕ್ಷೆಯ ನಂತರ ಚಿರತೆ 5 ವರ್ಷದ ಪ್ರಾಯದ್ದು ಎಂದು ಗೊತ್ತಾಗಿದೆ. ಮೇಲ್ನೋಟಕ್ಕೆ ಸ್ವಾಭಾವಿಕ ಸಾವು ಎಂದು ತಿಳಿದುಬಂದಿದೆ. ಆರ್‌ಎಫ್‌ಒ ಸಂತೋಷ ಮಲ್ಲನಗೌಡ್ರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಶು ವೈದ್ಯಾಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ನಡೆದು ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮೃತದೇಹ ಪತ್ತೆಯಾದ ಜಾಗದಲ್ಲೇ ನಿಯಮಾನುಸಾರ ಅಂತ್ಯಕ್ರಿಯೆ ಮಾಡಲಾಯಿತು. ತಹಸೀಲ್ದಾ‌ರ್ ಭರತ್ ರಾಜ್, ಎಸಿಎಫ್ ಮೋಹನ್ ಕುಮಾರ್, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

HOSANAGARA- Body-of-leopard-found

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close