ಭೀಕರ ಬೈಕ್ ಅಪಘಾತ - ಬೈಕ್ ಸವಾರ ಕೋಟೆಕೊಪ್ಪ ರಮೇಶ್ ಸ್ಥಳದಲ್ಲಿಯೇ ಸಾವು-Horrific bike accident - Biker Kotekoppa Ramesh dies on the spot

SUDDILIVE || ANANDAPURA

ಭೀಕರ ಬೈಕ್ ಅಪಘಾತ - ಬೈಕ್ ಸವಾರ ಕೋಟೆಕೊಪ್ಪ ರಮೇಶ್ ಸ್ಥಳದಲ್ಲಿಯೇ ಸಾವು-Horrific bike accident - Biker Kotekoppa Ramesh dies on the spot    

Horriffic, accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೌತಮಪುರ ಸಮೀಪದ ಬೈರಾಪುರ ಗ್ರಾಮದಲ್ಲಿ ಭೀಕರ ಬೈಕ್ ಅಪಘಾತ ಸಂಭವಿಸಿ, ಕೋಟೆಕೊಪ್ಪ ಗ್ರಾಮದ ನಿವಾಸಿ ರಮೇಶ್ (55) ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಮೃತ ರಮೇಶ್ ಅವರು ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಪಕ್ಕದಲ್ಲಿದ್ದ ಮಾಹಿತಿ ಬೋರ್ಡ್‌ಗೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ರಮೇಶ್ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ದೃಶ್ಯ ಕಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿದ ಕೂಡಲೇ ಆನಂದಪುರ ಪೊಲೀಸ್ ಠಾಣೆಯ ಪಿಎಸೈ ಪ್ರವೀಣ್ ಎಸ್.ಪಿ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದ ಸ್ಥಳದಲ್ಲಿ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ರಸ್ತೆ ಪಕ್ಕದ ಬೋರ್ಡ್ ಕೂಡ ಹಾನಿಗೊಳಗಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆನಂದಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Horrific bike accident - Biker Kotekoppa Ramesh dies on the spot

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close