ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನಕ್ಕೆ ಆಹ್ವಾನ-Invitation for direct interview for the post of Primary Health Protection Officer

SUDDILIVE || SHIVAMOGGA

ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನಕ್ಕೆ ಆಹ್ವಾನ-Invitation for direct interview for the post of Primary Health Protection Officer     

Health, protection



ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತುಮರಿ, ಮಳೂರು ಮತ್ತು ಬ್ಯಾಕೋಡು ಉಪಕೇಂದ್ರಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗಳಿಗೆ ಫೆ. 02 ರಂದು ಬೆಳಗ್ಗೆ 10.30 ರಿಂದ ಮ. 1.30 ರವರೆಗೆ ಶಿವಮೊಗ್ಗ ಬಿ.ಹೆಚ್.ರಸ್ತೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಎನ್.ಹೆಚ್.ಎಂ. ವಿಭಾಗದಲ್ಲಿ  ನೇರ ಸಂದರ್ಶನ ಏರ್ಪಡಿಸಲಾಗಿದೆ.

ಆಸಕ್ತರು ಸಂಬಂಧಪಟ್ಟ ಹುದ್ದೆಯ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ ಹಾಗೂ ಹುದ್ದೆಗೆ ಸಂಬಂಧಪಟ್ಟ ಮೂಲ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಸಂಘದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-200337 ನ್ನು ಸಂಪರ್ಕಿಸುವುದು.

Invitation for direct interview for the post of Primary Health Protection Officer 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close