ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ- Man commits suicide by hanging himself in barn

SUDDILIVE || RIPPONPETE 

ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ- Man commits suicide by hanging himself in barn   




ಹರತಾಳು ಸಮೀಪದ ದೇವಿಕೊಪ್ಪ ಗ್ರಾಮದಲ್ಲಿ ಮನಕಲುಕುವ ಘಟನೆ ಸಂಭವಿಸಿದ್ದು, ಮನೆ ಪಕ್ಕದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಗುರುರಾಜ್ ಬಿನ್ ನಾರಾಯಣ್ ಆಚಾರ್ (45) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಮಾಹಿತಿ ಪ್ರಕಾರ, ಗುರುರಾಜ್ ಅವರು ಕೆಲಕಾಲದಿಂದ ಸಾಲ ಭಾದೆಯಿಂದ ಬಳಲುತಿದ್ದು ಈ ಹಿನ್ನಲೆಯಲ್ಲಿ ಬೇಸತ್ತ ಅವರು ಮಂಗಳವಾರ ಮನೆ ಸಮೀಪದ ಕೊಟ್ಟಿಗೆಯಲ್ಲಿ ಅವರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ವಿಷಯ ತಿಳಿದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ರಿಪ್ಪನ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಂದಿನ ಕಾನೂನು ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮರಣೋತ್ತರ ಪರೀಕ್ಷಾ ಕೇಂದ್ರದಲ್ಲಿ ಇರಿಸಲಾಗಿದೆ.

Man commits suicide by hanging himself in barn



Barn, man

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close