ಈಶ್ವರಪ್ಪನವರಿಗೆ ಬೆದರಿಕೆ ಕರೆ, ನಾಳೆ ಎಸ್ಪಿಗೆ ದೂರು ನೀಡಲು ನಿರ್ಧಾರ-Threaatening calls for Eshwarappa

 SUDDILIVE || SHIVAMOGGA

ಈಶ್ವರಪ್ಪನವರಿಗೆ ಬೆದರಿಕೆ ಕರೆ, ನಾಳೆ ಎಸ್ಪಿಗೆ ದೂರು ನೀಡಲು ನಿರ್ಧಾರ-Threatening calls for Eshwarappa

Threatening, Eshwarappa


ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರಿಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ ಬಂದಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಧಿಕಾರಿಗಳಿಗೆ ನಾಳೆ ದೂರು ಸಲ್ಲಿಸಲು ಈಶ್ವರಪ್ಪ ನಿರ್ಧರಿಸಿದ್ದಾರೆ.

ಜವವರಿ 7ರಂದು ಈ‍ಶ್ವರಪ್ಪ ಅವರಿಗೆ ವಿದೇಶದಿಂದ ಕರೆ ಬಂದಿದೆ ಎಂದು ತಿಳಿದು ಬಂದಿದೆ. ಸದ್ಯ ಪ್ರವಾಸದಲ್ಲಿರುವ ಈ‍ಶ್ವರಪ್ಪ ಶಿವಮೊಗ್ಗಕ್ಕೆ ಹಿಂತಿರುಗಿದ ಬಳಿಕ ದೂರು ನೀಡಲು ನಿರ್ಧರಿಸಿದ್ದಾರೆ. ಜನವರಿ 9ರಂದು ಅವರು ಜಿಲ್ಲಾ ರಕ್ಷಣಾಧಿಕಾರಿ ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ವಿದೇಶದಿಂದ ಬೆದರಿಕೆ ಕರೆಗಳು ಬರುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ಮತ್ತು ಆರ್ಟಿಕಲ್ 370 ಕುರಿತು ಮಾತನಾಡುವುದು ನಿಲ್ಲಸಿದೆ ಇದ್ದರೆ 48 ಗಂಟೆಗಳಲ್ಲಿ ಕೊಲೆ ಮಾಡುವುದಾಗಿ ಕರೆ ಬಂದಿತ್ತು.

2023ರಲ್ಲಿ ಬೆದರಿಕೆ ಕರೆ ಬಂದಿತ್ತು. ಅಲ್ಲದೆ ಪಿಎಫ್‌ಐ ಕಾರ್ಯಕರ್ತರು ತಮ್ಮ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದ್ದರು. 2024ರಲ್ಲಿ ತಮ್ಮ ಬೆಂಬಲಿಗರಿಗೂ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿ ಈಶ್ವರಪ್ಪ ಅವರು ಶಿವಮೊಗ್ಗ ಎಸ್‌ಪಿ ಅವರಿಗೆ ದೂರು ನೀಡಿದ್ದಾರೆ. 

ವಿದೇಶದಿಂದ ಕೊಲೆ ಬೆದರಿಕೆ ಹಿನ್ನೆಲೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರಿಗೆ ಪೊಲೀಸ್‌ ಭದ್ರತೆ ಮತ್ತು ಎಸ್ಕಾರ್ಟ್‌ ಒದಗಿಸಲಾಗಿತ್ತು. ಇತ್ತೀಚೆಗೆ ಈ‍ಶ್ವರಪ್ಪ ಅವರಿಗೆ ಒದಗಿಸಿದ್ದ ಎಸ್ಕಾರ್ಟ್‌ ಮತ್ತು ಪೊಲೀಸ್‌ ಭದ್ರತೆಯನ್ನು ಸರ್ಕಾರ ಹಿಂಪಡೆದಿತ್ತು. ಇದರ ಬೆನ್ನಿಗೆ ಪುನಃ ಬೆದರಿಕೆ ಕರೆ ಬಂದಿದೆ ಎಂದು ಆರೋಪಿಸಲಾಗಿದೆ.

Threatening calls for Eshwarappa

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close