ನಗರ ಯುವ ಕಾಂಗ್ರೆಸ್ ನಿಂದ ರಾಜ್ಯಾಪಾಲ ಹಠಾವೋ, ಕರ್ನಾಟಕ ಬಚಾವೋ ಆಂದೋಲನ- Urban Youth Congress launches Governor Hathao, Karnataka Bachao Movement

 SUDDILIVE || SHIVAMOGGA

ನಗರ ಯುವ ಕಾಂಗ್ರೆಸ್ ನಿಂದ ರಾಜ್ಯಾಪಾಲ ಹಠಾವೋ, ಕರ್ನಾಟಕ ಬಚಾವೋ ಆಂದೋಲನ- Urban Youth Congress launches Governor Hathao, Karnataka Bachao Movement     

Urban, Youthcongress


ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಸಂವಿಧಾನಕ್ಕೆ ಅಪಮಾನ ವೇಷದ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಆಗ್ರಹಿಸಿ ಇಂದು ನಗರ ಯುವ ಕಾಂಗ್ರೆಸ್ ಮಹಾನಗರ ಪಾಲಿಕೆಯ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದೆ.

ಭಾರತದ ಸಂವಿಧಾನದಂತೆ ಯಾವುದೇ ರಾಜ್ಯದ ವಿಧಾನ ಮಂಡಲ ಅಧಿವೇಶನದಲ್ಲಿ ರಾಜ್ಯ ಸಚಿವ ಸಂಪುಟ ಸಿದ್ಧಪಡಿಸುವ ಭಾಷಣವನ್ನು ರಾಜ್ಯಪಾಲರು ಮಾಡಬೇಕಾಗುತ್ತದೆ ಆದರೆ ನೆನ್ನೆ ದಿನ ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಲೋಟ್ ಸಲದ ಕಾರಣ ನೀಡಿ ತಮ್ಮ ಭಾಷಣವನ್ನು ಮುಟ್ಟುವುಗೊಳಿಸಿ ಸಂವಿಧಾನಕ್ಕೆ ಅಪಮಾನ ವ್ಯಸಗಿದ್ದಾರೆ ಎಂದು ಪಕ್ಷ ಆರೋಪಿಸಿದೆ.

 ರಾಜ್ಯಪಾಲರು ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುತ್ತಾರೆ ಹೊರತು ರಾಜ್ಯ ಸರ್ಕಾರದ ಅಡಿಯಲ್ಲಿ ಅಲ್ಲ ನಿನ್ನೆ ದಿನ ರಾಜ್ಯಪಾಲರು ನಡೆದುಕೊಂಡಿರುವ ರೀತಿ ಅವರ ಕೇಂದ್ರ ಸರ್ಕಾರದ ಬಾಲ ಬುಡುಕರು ಎಂಬುದನ್ನು ಸಾಬೀತುಪಡಿಸಿದೆ 

ವರ್ಷದ ಮೊದಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುವುದು ರೂಢಿ ಈ ಭಾಷಣದಲ್ಲಿ ಅಕ್ಷಯಪಾತ ಸಾಲುಗಳಿವೆ ಎಂದು ಕ್ಷುಲ್ಲಕ ಕಾರಣ ನೀಡಿ ಆಡಳಿತರೂಢ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಕೆಲಸವನ್ನು ರಾಜ್ಯಪಾಲರೇ ಮಾಡಿರುವುದು ಇದೇ ಮೊದಲ ಬಾರಿಯಾಗಿದೆ ಇಂತಹ ನಡೆ ಸಂವಿಧಾನಕ್ಕೆ ಮಾರಕವಾಗಿದೆ ರಾಜ್ಯಪಾಲರು ಭಾಷಣ ಮಾಡುವ ಮೂಲಕ ಸದನದ ಗಾಂಭೀರ್ಯತೆಯನ್ನು ಕಾಪಾಡಬೇಕು ಆದರೆ ಅವರ ನಡುವೆ ಸದನದಲ್ಲಿ ಗದ್ದಲಕ್ಕೆ ಕಾರಣವಾಗಿದೆ ಎಂದು ಸಂಘಟನೆ ಆರೋಪಿಸಿದೆ. 

ಇಂತಹ ರಾಜ್ಯಪಾಲರು ನಮಗೆ ಬೇಡ ಕೂಡಲೇ ರಾಷ್ಟ್ರಪತಿಗಳು ಕರ್ನಾಟಕದ ರಾಜ್ಯಪಾಲ ತಾವರ್ಚನ್ನು ದೆಹಲೋಟ್ ರನ್ನು ವಾಪಾಸು ಕರೆಸಿಕೊಳ್ಳಬೇಕು ಇದಕ್ಕಾಗಿ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ವತಿಯಿಂದ ರಾಜ್ಯಪಾಲ ಹಟಾವೋ, ಕರ್ನಾಟಕ ಬಚಾವೋ ಆಂದೋಲನ ನಡೆಸುತ್ತಿದ್ದೇವೆ ಕೂಡಲೇ ಅವರನ್ನು ವಾಪಸ್ ಕರೆಸಿಕೊಳ್ಳದಿದ್ದರೆ ಯುವ ಕಾಂಗ್ರೆಸ್ ಉಗ್ರ ಪ್ರತಿಭಟನೆ ನಡೆಸುತ್ತದೆ ಎಂದು ಪಕ್ಷ ಆಗ್ರಹಿಸಿದೆ

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ ಮಧುಸೂಧನ್ ಹೆಚ್ಚಿಸಿ ಯೋಗೇಶ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತರ್ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್ ಮೊದಲಾದವರು ಭಾಗಿಯಾಗಿದ್ದರು

Urban Youth Congress launches Governor Hathao, Karnataka Bachao Movement 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close