ಬಿಎಸ್ ಎನ್ ಎಲ್ ಗೆ ಭಾವಪೂರ್ಣ ಶ್ರದ್ಧಾಂಜಲಿಯ ಬ್ಯಾನರ್ -Villagers pay emotional tribute banner to BSNL

 SUDDILIVE || SHIVAMOGGA

ಬಿಎಸ್ ಎನ್ ಎಲ್ ಗೆ ಭಾವಪೂರ್ಣ ಶ್ರದ್ಧಾಂಜಲಿಯ ಬ್ಯಾನರ್ -Villagers pay emotional tribute banner to BSNL         

Emotional, tribute

ಒಂದು ಕಡೆ ಶಿವಮೊಗ್ಗ ಸಂಸದರು ಭಗೀರಥ ಪ್ರಯತ್ನಪಟ್ಟು ನೆಟ್ ವರ್ಕ್ ವಿಷಯದಲ್ಲಿ ಜಿಲ್ಲೆಯಲ್ಲಿ ಕ್ರಾಂತಿ ರೂಪಿಸಲು ಮುಙದಾದರೆ ಮಲೆನಾಡಿನ ಜನ ಬಿಎದ್ ಎನ್ ಎಲ್ ಸಂಸ್ಥಯ ಬ್ಯಾನರ್ ನಿರ್ಮಿಸಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 

ಭಾರತದ ಅತಿ ದೊಡ್ಡ ಹಾಗೂ ಪುರಾತನ ದೂರಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಿರಂತರ ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ನೆಟ್‌ವರ್ಕ್ ವ್ಯತ್ಯಯಗಳ ನಡುವೆಯೂ ಸಮಸ್ಯೆ ಬಗೆಹರಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸಾರ್ವಜನಿಕರು ತಮ್ಮ ಆಕ್ರೋಶವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿದ್ದು, ಬಿಎಸ್‌ಎನ್‌ಎಲ್ ಪ್ರತಿಕೃತಿಯ ಮೇಲೆ ‘ಬಿಎಸ್‌ಎನ್‌ಎಲ್‌ಗೆ ಭಾವಪೂರ್ಣ ಶ್ರದ್ಧಾಂಜಲಿ’ ಎಂಬ ಪ್ಲೆಕ್ಸ್ ಅಳವಡಿಸಿದ್ದಾರೆ.ಹೊಂಬುಜ ಮಠಕ್ಕೆ ತೆರಳುವ ರಸ್ತೆಯಲ್ಲಿ ಈ ಪ್ಲೆಕ್ಸ್ ನ್ನು ಅಳವಡಿಸಿದ್ದಾರೆ.

ಇಲ್ಲಿ ಬಳಸಿರುವ “ನೆಟ್‌ವರ್ಕ್‌ಗೆ ಭಾವಪೂರ್ಣ ಶ್ರದ್ಧಾಂಜಲಿ” ಎಂಬ ಪದಬಳಕೆ ನಿಜವಾದ ಶ್ರದ್ಧಾಂಜಲಿ ಅಲ್ಲ; ಬದಲಾಗಿ ಇಂಟರ್‌ನೆಟ್, ಮೊಬೈಲ್ ಹಾಗೂ ಇತರೆ ಸಂವಹನ ಸೇವೆಗಳ ಸಂಪೂರ್ಣ ವೈಫಲ್ಯಕ್ಕೆ ಜನರು ವ್ಯಕ್ತಪಡಿಸುವ ವ್ಯಂಗ್ಯಮಿಶ್ರಿತ ನಿರಾಸೆಯ ಪ್ರತಿಬಿಂಬವಾಗಿದೆ. ಈ ಪದವನ್ನು ಹಿಂದೆ ಕೂಡ ಬಿಎಸ್‌ಎನ್‌ಎಲ್ ಸೇವೆಗಳ ಕುಸಿತದ ವಿರುದ್ಧ ನಡೆದ ಹಲವು ಪ್ರತಿಭಟನೆಗಳಲ್ಲಿ ಬಳಸಲಾಗಿದೆ.

ನೆಟ್‌ವರ್ಕ್ ಸಂಪೂರ್ಣ ಸ್ಥಗಿತಗೊಂಡಂತೆಯೇ ಇರುವ ಪರಿಸ್ಥಿತಿಯಿಂದ ದಿನನಿತ್ಯದ ಕೆಲಸಗಳು, ಆನ್‌ಲೈನ್ ಸೇವೆಗಳು, ವಿದ್ಯಾರ್ಥಿಗಳ ಅಧ್ಯಯನ ಹಾಗೂ ರೈತರ ಸಂಪರ್ಕ ವ್ಯವಸ್ಥೆ ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿ ಈ ಪ್ಲೆಕ್ಸ್ ಅಳವಡಿಸಿರುವ ಸಾಧ್ಯತೆಯಿದೆ.

Villagers pay emotional tribute to BSNL banner

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close