ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು -ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ-Water released from Bhadra reservoir into Tunga-Bhadra river - public advised to be cautious

SUDDILIVE  || SHIVAMOGGA

ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು -ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ-Water released from Bhadra reservoir into Tunga-Bhadra river - public advised to be cautious    

Water, release


2025-26ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗ-ಭದ್ರಾ ನದಿಗೆ ಜ.20 ರಿಂದ ಜ. 30 ಪ್ರತಿ ದಿನ 500 ಕ್ಯೂಸೆಕ್ಸ್ನಂತೆ ಹಾಗೂ ಜ. 31 ರಂದು 300 ಕ್ಯೂಸೆಕ್ಸ್ ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುವುದು.

 ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‌ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ, ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Water released from Bhadra reservoir into Tunga-Bhadra river - public advised to be cautious

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close