ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಯುವಕ ಸಾವು- Young man dies after hitting electric pole

 SUDDILIVE || SHIVAMOGGA

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಯುವಕ ಸಾವು- Young man dies after hitting electric pole     

Electric, pole


ಗೋಬಿ ತಿಂದು ವಾಪಾಸಾಗುವಾಗ ಬಳಿ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ  ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದೆ. ತಾಲೂಕಿನ ಗೊಂದಿಚಟ್ನಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ದರ್ಶನ್.ಕೆ (18) ತನ್ನ ಬೈಕ್‌ನಲ್ಲಿ ಸ್ನೇಹಿತ ಪುವರಸ ಎಂಬಾತನನ್ನು ಕೂರಿಸಿಕೊಂಡು ಶಿವಮೊಗ್ಗ-ಹೊನ್ನಾಳಿ ರಸ್ತೆಯಲ್ಲಿ ತೆರಳುತ್ತಿದ್ದನು. ಗೊಂದಿಚಟ್ನಹಳ್ಳಿ ಗ್ರಾಮದ ಬಳಿ ಬರುತ್ತಿದ್ದಂತೆ ದರ್ಶನ್ ಚಾಲನೆ ಮಾಡುತ್ತಿದ್ದ ಬೈಕ್‌ ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟಾಗಿದ್ದ ದರ್ಶನ್‌ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರೀಕ್ಷಿಸಿದ ವೈದ್ಯರು ಆತ ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗಾಯಗೊಂಡಿರುವ ಪುವರಸ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Young man dies after hitting electric pole

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close