SUDDILIVE || SHIVAMOGGA
ಕಾಂಗ್ರೆಸ್ ಕಚೇರಿಗೆ ಬಿಜೆಪಿಯಿಂದ ಮುತ್ತಿಗೆ ಯತ್ನ- BJP attempts to siege Congress office
ಜಿಲ್ಲಾ ಕಾಂಗ್ರೆಸ್ ಕಚೇರಿ ಮೇಲೆ ಮುತ್ತಿಗೆ ಯತ್ನ ನಡೆಸಿದ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಕಾಂಗ್ರೆಸ್ನ ಮುಖಂಡ ರಾಹುಲ್ ಗಾಂಧಿ ಅವರು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಮಾನ ಹರಾಜು ಹಾಕಿ, ಕಾಂಗ್ರೆಸ್ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಇಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಾರ್ಕ್ ಬಡಾವಣೆಯಲ್ಲಿ ಇರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಇದಕ್ಕೂ ಮುನ್ನ ಬಿಜೆಪಿ ಕಾರ್ಯಕರ್ತರು ಟಿ. ಶೀನಪ್ಪಶೆಟ್ಟಿ ವೃತ್ತದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ, ರಾಹುಲ್ ಗಾಂಧಿ ಪ್ರತಿಕೃತಿಗೆ ಬೆಂಕಿ ಪ್ರತಿಭಟನೆ ನಡೆಸಿದರು. ಟಿ. ಶೀನಪ್ಪ ವೃತ್ತದಿಂದ ಬಾಲರಾಜ ಅರಸ್ ರಸ್ತೆಯ ಮೂಲಕ ಪಾರ್ಕ್ ಬಡಾವಣೆಯಲ್ಲಿ ಇರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ ಮಾಡಿದಾಗ ಪೊಲೀಸರು ಅವರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಸುಮಾರು 100 ಹೆಚ್ಚು ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋದರು.
BJP attempts to siege Congress office

