SUDDILIVE || THIRTHAHALLI
ಕಾರಿನ ಟಯರ್ ಬ್ಲಾಸ್ಟ್ - ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು- Car tire blast - Car hits electric pole..!
ಉಡುಪಿ ಭಾಗದಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಕಾರೊಂದು ಟಯರ್ ಬ್ಲಾಸ್ಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಪಟ್ಟಣದ ಸಮೀಪದ ಬಾಳೇಬೈಲ್ ನಲ್ಲಿ ನಡೆದಿದೆ.
ಕಾರು ಟಯರ್ ಬ್ಲಾಸ್ಟ್ ಆಗಿ ರಸ್ತೆ ಬದಿಯಲ್ಲಿ ನಿಂತಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಇದ್ದವರಿಗೆ ಯಾವುದೇ ರೀತಿಯ ತೊಂದರೆ ಆಗಿಲ್ಲ. ಸ್ಥಳಕ್ಕೆ ತೀರ್ಥಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Car tire blast - Car hits electric pole..!
