SUDDILIVE || HOSANAGARA
ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಜಾಮೀನಿನ ಮೇಲೆ ಬಿಡುಗಡೆ- Close aide of MLA Araga jnyanendra released on bail
ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕರಾದ ರಾಜೇಶ್ ಹಿರಿಮನೆ ನ್ಯಾಯಾಂಗ ಬಂಧನದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ ಆಪ್ತ ಸಹಾಯಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಹೊಸನಗರ ಜೆ.ಎಂ.ಎಫ್.ಸಿ (JMFC) ನ್ಯಾಯಾಲಯ ಆದೇಶ ಹೊರಡಿಸಿತ್ತು.
ಈಗ ಹೊಸನಗರ ನ್ಯಾಯಾಲಯ ಒಂದು ಲಕ್ಷ ರೂ. ಬಾಂಡ್ ಮೇಲೆ ಬಿಡುಗಡೆ ಮಾಡಿದೆ. ಇದರಿಂದ ಒಂದು ದಿನ ನ್ಯಾಯಾಂಗ ಬಂಧನದಲ್ಲಿದ್ದ ರಾಜೇಶ್ ಹಿರಿಮನೆಯವರು ಬಿಡುಗಡೆಯಾಗಿದ್ದಾರೆ. ರಾಜೇಶ್ ಹಿರಿಮನೆ ಮಳಲಿ ಗ್ರಾಮದ ನಿವಾಸಿಯಾಗಿದ್ದಾರೆ.
ಘಟನೆಯ ವಿವರ:
ಆರೋಪಿ ರಾಜೇಶ್ ಹಿರಿಮನೆ, ರಾಹುಲ್ ಗಾಂಧಿಯವರ ಮುಖದ ಅರ್ಧ ಭಾಗ ಹಾಗೂ ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿದ ಅಧಿಕಾರಿ 'ಅಸಿಮ್' (ASIM) ಎಂಬುವರ ಫೋಟೋವನ್ನು ಎಡಿಟ್ ಮಾಡಿ ಸೇರಿಸಿದ್ದರು. ಈ ಚಿತ್ರಕ್ಕೆ "ONE AGENDA" ಎಂಬ ಟ್ಯಾಗ್ ಲೈನ್ ನೀಡಿ, ಫೇಸ್‌ಬುಕ್‌ನಲ್ಲಿ ಹರಿಬಿಡಲಾಗಿತ್ತು.
ಈ ಕೃತ್ಯದ ಕುರಿತಂತೆ ದಿನಾಂಕ 20/05/2025 ರಂದು ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS) ಕಾಯ್ದೆಯ ಸೆಕ್ಷನ್ 353(2) ರ ಅಡಿಯಲ್ಲಿ ಪೊಲೀಸರು ಸ್ವಯಂ ಪ್ರೇರಿತ (Suo Moto) ದೂರು ದಾಖಲಿಸಿಕೊಂಡಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು, ಆರೋಪಿ ರಾಜೇಶ್ ಹಿರಿಮನೆ ಅವರನ್ನು ದಿನಾಂಕ 24/02/2026 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಿದ್ದರು. ಈ ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.
Close aide of MLA Araga jnyanendra released on bail
