SUDDILIVE || SHIVAMOGGA
ಮೃತ ಸಂಕೇತ್ ಕುಟುಂಬಕ್ಕೆ ಪರಿಹಾರ ಘೋಷಣೆ-Compensation announced for the family of the deceased
ಶಿವಮೊಗ್ಗದ ಸೂಳೆಬೈಲಿನಲ್ಲಿ ನಡೆದ ಬಾಲಕ ಸಂಕೇತ್ ಹತ್ಯೆ ಪ್ರಕರಣದಲ್ಲಿ ಸರ್ಕಾರದಿಂದ ಪರಿಹಾರ ಘೋಷಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳನ್ನು ಗಾಂಜಾ ಟೆಸ್ಟ್ ಗೆ ಒಳಪಡಿಸುತ್ತೇವೆ. ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ. ಗಾಂಜಾ ಹಾವಳಿ ಬಗ್ಗೆಯೂ ತನಿಖೆ ಮಾಡುತ್ತಿದ್ದೇವೆ. ಇಲ್ಲಿ ಒಂದು ಪೊಲಿಸ್ ಉಪಠಾಣೆಯನ್ನು ತೆರೆಯಲು ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದ ಎಸ್ಪಿ ಅವರ ಹೇಳಿಕೆ ಹಿಂದೆಯೇ ಡಿಸಿ ಪ್ರಭುಲಿಂಗ ಕವಲಿಕಟ್ಟಿ ಮೃತ ಬಾಲಕನ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.
ಸರ್ಕಾರದಿಂದ 15 ಲಕ್ಷ ಪರಿಹಾರ ಘೋಷಣೆ
ಮೃತ ಸಂಕೇತ್ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 10 ಲಕ್ಷ, ಶಿಕ್ಷಣ ಇಲಾಖೆಯಿಂದ 5 ಲಕ್ಷ ನೀಡಲಾಗುತ್ತದೆ ಎಂದು ಸರ್ಕಾರದ ಪರವಾಗಿ ಪ್ರಭುಲಿಂಗ ಕವಳಿಕಟ್ಟೆ ಪರಿಹಾರ ಘೋಷಣೆ ಮಾಡಿದ್ದಾರೆ. ನಿನ್ನೆ ನಡೆದ ಘಟನೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಸಂಕೇತ ಮೃತರಾಗಿದ್ದರು. ಸಿಎಂ, ಉಸ್ತುವಾರಿ ಸಚಿವರೊಂದಿಗೆ ಮಾತಾಡಿ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಈಗಾಗಲೇ ಏಳು ಮಂದಿ ಆರೋಪಗಳನ್ನು ಬಂಧಿಸಿಲಾಗಿದೆ. ಅಟ್ರಾಸಿಟಿ ಕೇಸ್ ಕೂಡ ದಾಖಲಾಗಿದೆ, ಮೃತ ಸಂಕೇತ್ ಜೊತೆಗೆ ಗಾಯಾಳು ಆಗಿರುವ ಗಿರೀಶ್ ಗೆ ಪರಿಹಾರ ನೀಡಲಾಗುವುದು. ಮಾದಕ ವಸ್ತುಗಳ ಬಗ್ಗೆ ಸಾಕಷ್ಟು ಜಿಲ್ಲಾಡಳಿತದಿಂದ ಜಾಗೃತಿ ಕಾರ್ಯಕ್ರಮ ನಡೆಸುತ್ತಿದೆ. ಈ ಭಾಗದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಒದಗಿಸಲಾಗುವುದು. ಈ ಬಡಾವಣೆಯಲ್ಲಿ ಉಪ ಪೊಲೀಸ್ ಠಾಣೆ ತೆರೆಯುವ ಬಗ್ಗೆ ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದರು.
Compensation announced for the family of the deceased
