ಎಂಆರ್‌ಪಿ ಗಿಂತ ಹೆಚ್ಚಿನ ಹಣ ಪಡೆದ ಫ್ಲಿಪ್‌ಕಾರ್ಟ್ ಮೇಲೆ ದೂರು; ಪರಿಹಾರ ನೀಡಲು ಆಯೋಗದಿಂದ ಆದೇಶ-Complaint against Flipkart for charging more than MRP; Commission orders compensation

SUDDILIVE || SHIVAMOGGA

ಎಂಆರ್‌ಪಿ ಗಿಂತ ಹೆಚ್ಚಿನ ಹಣ ಪಡೆದ ಫ್ಲಿಪ್‌ಕಾರ್ಟ್ ಮೇಲೆ ದೂರು; ಪರಿಹಾರ ನೀಡಲು ಆಯೋಗದಿಂದ ಆದೇಶ-Complaint against Flipkart for charging more than MRP; Commission orders compensation    

Complaint, flipkart



ಶಿವಮೊಗ್ಗ ಜಿಲ್ಲೆಯ ಮಂಡಘಟ್ಟದ ಶಿವಕುಮಾರ್ ಎಸ್. ಎಂಬುವವರು ಬೆಂಗಳೂರು ಫ್ಲಿಪ್‌ಕಾರ್ಟ್ ಮುಖ್ಯ ವ್ಯವಸ್ಥಾಪಕರು ಹಾಗೂ ಉತ್ತರ ಪ್ರದೇಶದ ಮುಜಫರ್‌ನಗರದ ಶ್ರೀ ಲಕ್ಷ್ಮೀ ಪೈಂಟ್ಸ್ ಹೌಸ್ ಇವರುಗಳ ವಿರುದ್ಧ ಒಂದು ಲೀಟರ್ ಏಷಿಯನ್ ವುಡ್ ಪ್ರೈಮರ್‌ಗೆ ಎಂ.ಆರ್.ಪಿ ಗಿಂತ ಹೆಚ್ಚಿನ ಹಣ ಪಡೆದಿರುತ್ತಾರೆ ಎಂದು ನೀಡಿದ ದೂರನ್ನು ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ನೀಡಿದ್ದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಎದುರುದಾರರಿಂದ ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ.

ದೂರುದಾರರು ಎದುರುದಾರರಿಂದ ಒಂದು ಲೀಟರ್ ಏಷಿಯನ್ ವುಡ್ ಪ್ರೈಮರ್‌ಗೆ ಶೇ. 76 ರಷ್ಟು ರಿಯಾಯಿತಿದರದಲ್ಲಿ ರೂ. 540/- ಹಾಗೂ ಶಿಪ್ಪಿಂಗ್ ಚಾರ್ಚ್ ರೂ. 41/- ಸೇರಿ ರೂ. 540/- ಗಳನ್ನು ಪಾವತಿಸಿ ಖರೀದಿಸಿರುತ್ತಾರೆ. ಆದರೆ ಪರೀಶೀಲಿದಾಗ ಎಂ.ಆರ್.ಪಿ. ಬೆಲೆಯನ್ನು ಅಳಿಸಿ, ಬಿಳಿ ಕಾಗದವನ್ನು ಅಂಟಿಸಿರುತ್ತಾರೆ. ಅದರ ನಿಜವಾದ ಬೆಲೆ 324/- ರೂ.ಗಳಿದ್ದು ರೂ. 216/-ಗಳ ಹೆಚ್ಚಿನ ಮೊತ್ತ ಪಡೆದಿದ್ದು, ಈ ಕುರಿತು ಎದುರುದಾರರಿಗೆ ಹೆಚ್ಚಿನ ಹಣವನ್ನು ಮರುಪಾವತಿಸುವಂತೆ ಲೀಗಲ್ ನೋಟೀಸ್ ನೀಡಿರುತ್ತಾರೆ. ಆದರೆ ಎದುರುದಾರರು ಯಾವುದೇ ಪ್ರತ್ಯುತ್ತರ ನೀಡದೆ ಸೇವಾನ್ಯೂನತೆ ಎಸಗಿರುತ್ತಾರೆ ಎಂದು ಆಯೋಗಕ್ಕೆ ದೂರನ್ನು ಸಲ್ಲಿಸಿರುತ್ತಾರೆ.

ಆಯೋಗವು ದೂರುದಾರರ ಸಲ್ಲಿಸಿರುವ ಪ್ರಮಾಣ ಪತ್ರ ಮತ್ತು ದಾಖಲಾತಿಗಳನ್ನು ಪರಿಶೀಲಿಸಿ, ದೂರುದಾರರ ವಾದವನ್ನು ಆಲಿಸಿ, ಎದುರುದಾರರ ಎಂಆರ್‌ಪಿ ಗಿಂತ ಹೆಚ್ಚಿ ಹಣವನ್ನು ಪಡೆದು ಸೇವಾ ನ್ಯೂನ್ಯತೆ ಎಸಗಿರುತ್ತಾರೆ ಎಂದು ತೀರ್ಮಾನಿಸಿ, ದೂರನ್ನು ಭಾಗಶಃ ಪುರಸ್ಕರಿಸಿ, ಎದುರುದಾರರು ದೂರುದಾರರಿಂದ ಪಡೆದಿರುವ ಹೆಚಿನ ಮೊತ್ತ ರೂ. 216/-ಗಳಿಗೆ ದಿ:13/09/2024ರಿಂದ ವಾರ್ಷಿಕ ಶೇ. 9ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣವನ್ನು ಈ ಆದೇಶವಾದ 45 ದಿನಗಳೊಳಗಾಗಿ ದೂರುದಾರರಿಗೆ ಪಾವತಿಸುವಂತೆ ತಪ್ಪಿದ್ದಲ್ಲಿ ವಾರ್ಷಿಕ ಶೇ. 12ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡುವಂತೆ ಹಾಗೂ ರೂ. 25,000/- ಗಳನ್ನು ಮಾನಸಿಕ ಹಿಂಸೆ ಮತ್ತು ದೂರಿನ ಖರ್ಚು ವೆಚ್ಚಕ್ಕಾಗಿ ಈ ಆದೇಶವಾದ 45 ದಿನಗಳೊಳಗಾಗಿ ದೂರುದಾರರಿಗೆ ಪಾವತಿಸುವಂತೆ ತಪ್ಪಿದ್ದಲ್ಲಿ ವಾರ್ಷಿಕ ಶೇ. 12ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಡಿ.31 ರಂದು ಆದೇಶಿಸಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟಾçರ್ ಗಂಗಾಧರ ನಾಯ್ಕ್ ಎಂ.ಟಿ. ತಿಳಿಸಿದ್ದಾರೆ.  

Complaint against Flipkart for charging more than MRP; Commission orders compensation

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close