SUDDILIVE || SHIVAMOGGA
ಅಪ್ರಾಪ್ತೆಯನ್ನ ಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ- Court sentences accused of sexually assaulting minor while guarding her
ಅಪ್ರಾಪ್ತೆಯನ್ನ ಅಪಹರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ವೆಸೆಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-1) ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ತೀರ್ಥಹಳ್ಳಿ ತಾಲ್ಲೂಕಿನ 28 ವರ್ಷದ ಯುವಕನು, ತೀರ್ಥಹಳ್ಳಿ ತಾಲ್ಲೂಕಿನ 17 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಬಗ್ಗೆ ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಕಲಂ 366, 376 IPC, 4 ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತದೆ.
ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಅಶ್ವಥ್ ಗೌಡ ಜೆ ಪಿಐ ರವರು ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.
ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಶ್ರೀಧರ್ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-1) ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿಯ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ಶ್ರೀ ನಿಂಗನಗೌಡ ಭ ಪಾಟೀಲ್ ರವರು ಈ ದಿನ ದಿನಾಂಕ:18-02-2026 ರಂದು ಆರೋಪಿತನಿಗೆ 10 ವರ್ಷ ಕಠಿಣ ಕಾರಾವಾಸ ಸಜೆ ಮತ್ತು 1,30,000 ರೂ/- ದಂಡವನ್ನು ಆದೇಶಿಸಿರುತ್ತದೆ ಹಾಗೂ ಸರ್ಕಾರದ ವತಿಯಿಂದ 4,00,000/- ರೂ ಗಳನ್ನು ನೊಂದ ಬಾಲಕಿಗೆ ನೀಡಲು ಆದೇಶಿಸಿರುತ್ತಾರೆ.
Court sentences accused of sexually assaulting minor while guarding her
