SUDDILIVE || SORABA
ಗಾಯಾಳುಗಳನ್ನ ಆಸ್ಪತ್ರೆಗೆ ಸಾಗಿಸಲು ನೆರವಾದ ಡಿಸಿ-DC helped the injured to the hospital
ಸಾಗರದಿಂದ ಸೊರಬಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳ ನೆರವಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಧಾವಿಸಿ ಕರ್ತವ್ಯ ಮೆರೆದಿದ್ದಾರೆ.
ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಬುಧವಾರ ಸೊರಬ ತಾಲ್ಲೂಕಿನ ಉಳವಿಯ ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸಾಗರ ದಿಂದ ಸೊರಬ ಹೋಗುವ ಮಾರ್ಗ ಮಧ್ಯೆ ಸಾಗುತ್ತಿರುವಾಗ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಗಮನಿಸಿದ ಜಿಲ್ಲಾಧಿಕಾರಿಗಳು, ತಮ್ಮ ವಾಹನವನ್ನು ನಿಲ್ಲಿಸಿ, ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.
ನಂತರ ಸೊರಬ ತಾಲ್ಲೂಕು ಕಚೇರಿಗೆ ಭೇಟಿ ನೀಡಿ, ತಹಶೀಲ್ದಾರ್ ಮತ್ತು ಇತರೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಗತಿ ಪರಿಶೀಲನೆ ಕೈಗೊಂಡು ಅಧಿಕಾರಿಗಳಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿದರು.
ತದನಂತರ ಅಧಿಕಾರಿಗಳೊಂದಿಗೆ ಸೊರಬದಲ್ಲಿರುವ ‘ಬಂಗಾರಧಾಮ ಉದ್ಯಾನ’ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಶಿರಸ್ತೇದಾರ್(ಆಡಳಿತ) ಚೇತನ್ , ಇತರೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
DC helped the injured to the hospital
