SUDDILIVE || SHIVAMOGGA
ಸೂಡ ಮತ್ತು ಕಾಡಾ ಅಧ್ಯಕ್ಷರ ಅವಧಿ ವಿಸ್ತರಣೆ-Extension of term of Suda and Kada presidents
ಇನ್ನೇನು ಸೂಡ ಹಾಗೂ ಕಾಡ ಅಧ್ಯಕ್ಷರ ಅವಧಿ ಮುಗಿದಿದೆ ಅನ್ನುವಷ್ಟರಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮತ್ತೊಂದು ಅವಧಿಗೆ ಅವರ ಅಧಿಕಾರ ಅವಧಿ ಮುಂದುವರೆಸಿ ಆದೇಶ ಹೊರಡಿಸಿ ನಿಬ್ಬರಗು ಉಂಟು ಮಾಡಿದ್ದಾರೆ.
ಶಿವಮೊಗ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅವರು ಸೇರಿದಂತೆ ರಾಜ್ಯದ ವಿವಿಧ ಹತ್ತು ಪ್ರಾಧಿಕಾರಗಳ ಅಧ್ಯಕ್ಷರ ಅವಧಿಯನ್ನು ಮುಂದುವರೆಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರಾ(ಕಾಡಾ) ಅಧ್ಯಕ್ಷರಾಗಿರುವ ಡಾ. ಅಂಶುಮಂತ್ ಗೌಡ ಅವರ ಅವಧಿಯನ್ನು ವಿಸ್ತರಿಸಲಾಗಿದೆ. ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳ ಅವಧಿಗೆ ನೇಮಕ ಮಾಡಿದ್ದ ಅಧ್ಯಕ್ಷರ ಅವಧಿಯು ಫೆ. 28 ಕ್ಕೆ ಕೊನೆಗೊಳ್ಳಲಿದ್ದು, ಶಿವಮೊಗ್ಗ ನಗರಾಭಿವೃದ್ದಿ ಪ್ರಾಧಿಕಾರ , ಕಾಡಾ ಸೇರಿದಂತೆ ಹತ್ತು ಪ್ರಾಧಿಕಾರಗಳ ಅಧ್ಯಕ್ಷರ ಅವಧಿಯನ್ನು ವಿಸ್ತರಿಸುವಂತೆ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಫೆ. 26 ರಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.
ಅದರಂತೆ ಮೈಸೂರು, ಶಿವಮೊಗ್ಗ. ಬಳ್ಳಾರಿ, ಹುಬ್ಬಳಿ-ಧಾರವಾಡ, ಮಂಗಳೂರು, ಬೀದರ್, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಮತ್ತು ಕರ್ನಾಟಕ ದ್ರಾಕ್ಷಾರಸ ಮಂಡಳಿ ಯ ಅಧ್ಯಕ್ಷರನ್ನು ಮುಂದುವರೆಸಿ ಸರ್ಕಾರ ಆದೇಶ ಹೊರಡಿಸಿದೆ.
Extension of term of Suda and Kada presidents

