SUDDILIVE || SHIVAMOGGA
ಡೈಲಿ ಎಕ್ಸ್ ಪ್ರಸ್ ರೈಲುಗಳ ನಿಲುಗಡೆ ವಿಸ್ತರಣೆ- Extension of the stops of Daily Express trains
ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆ ಅವಧಿ ಆರು ತಿಂಗಳು ವಿಸ್ತರಿಸಲಾಗಿದೆ. SWR ಮೈಸೂರು ರೈಲ್ವೆ ವಿಭಾಗ ಈ ಪ್ರಕಟಣೆ ಹೊರಡಿಸಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ, ರೈಲು ಸಂಖ್ಯೆ 16227/16228 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲಿನ ಅರಸಾಳು ನಿಲ್ದಾಣದ ನಿಲುಗಡೆ ಹಾಗೂ ರೈಲು ಸಂಖ್ಯೆ 16205/16206 ತಾಳಗುಪ್ಪ-ಮೈಸೂರು-ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಅರಸಾಳು ಮತ್ತು ಕುಂಸಿ ನಿಲ್ದಾಣಗಳ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಆರು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ.
ಈ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆಯು 2026ರ ಫೆಬ್ರವರಿ 24ರಿಂದ ಆಗಸ್ಟ್ 23ರವರೆಗೆ ಮುಂದುವರಿಯಲಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆಯೇ ರೈಲುಗಳು ಈ ನಿಲ್ದಾಣಗಳಲ್ಲಿ ನಿಲ್ಲಲಿವೆ.
Extension of the stops of Daily Express trains
