SUDDILIVE || SHIVAMOGGA
ಫೆ.15 ರಂದು ಮಹಾಶಿವರಾತ್ರಿ ದಿನದಂದು ಮಾಂಸ ಮಾರಾಟ ನಿಷೇಧ ಹಾಗೂ ಎರಡು ಕಡೆ ವಾಹನ ಸಂಚಾರಕ್ಕೆ ಬದಲಿ ಮಾರ್ಗ-Meat sale banned on Mahashivratri day and alternate route for vehicular traffic in both directions
ಫೆ.15 ರಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶಿವಮೊಗ್ಗ ನಗರದಾದ್ಯಂತ ಮಾಂಸ ಮಾರಾಟ ನಿಷೇಧ ಹಾಗೂ ಶಿವಮೊಗ್ಗ ನಗರದ ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ಮತ್ತು ಸೂಳೆಬೈಲ್ ಬೆಟ್ಟದ ಮಲ್ಲೇಶ್ವರ ದೇವಸ್ಥಾನದಲ್ಲಿ ಅಧಿಕ ಭಕ್ತರ ಸಂಖ್ಯೆಯಿರುವುದರಿಂದ ಬದಲಿ ಮಾರ್ಗವನ್ನವಾಹನ ಸವಾರರಿಗೆ ಜಿಲ್ಲಾಡಳಿತ ಸೂಚಿಸಿದೆ.
ಮೊದಲಿಗೆ ಫೆ.15 ರಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.
ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಫೆ.15 ರಂದು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.
ಎರಡು ಕಡೆ ಬದಲಿ ಮಾರ್ಗ
ಶಿವಮೊಗ್ಗ ನಗರದ ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ಮತ್ತು ಸೂಳೆಬೈಲ್ ಬೆಟ್ಟದ ಮಲ್ಲೇಶ್ವರ ದೇವಸ್ಥಾನದಲ್ಲಿ ಫೆ. 15 ರಂದು ಶಿವರಾತ್ರಿ ಹಬ್ಬದ ಪ್ರಯುಕ್ತ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಬಂದು ಹೋಗುವುದರಿಂದ ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿ ಫೆ. 15 ರ ಬೆಳಗ್ಗಿನ 4.00 ರಿಂದ ಫೆ. 16 ರ ಬೆಳಗ್ಗಿನ ಜಾವದವರೆಗೆ ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ನೀಡಿದ್ದಾರೆ.
ತೀರ್ಥಹಳ್ಳಿ ಮಾರ್ಗವಾಗಿ ಓಡಾಡುವ ವಾಹನಗಳನ್ನು ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುವ ವಾಹನಗಳು ಗಜಾನನ ಗ್ಯಾರೇಜ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್.ಹೆಚ್. ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು. ಹಾಗೂ ತೀರ್ಥಹಳ್ಳಿಯಿಂದ ಬರುವ ಎಲ್ಲಾ ವಾಹನಗಳು ಎನ್.ಹೆಚ್.ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನ ಕೊಪ್ಪ ಚಾನಲ್ ಕ್ರಾಸ್ ನಿಂದ ಗಜಾನನ ಗ್ಯಾರೇಜ್ ಮೂಲಕ ಬಂದು ಶಿವಮೊಗ್ಗ ಸೇರುವಂತೆ ಆದೇಶದಲ್ಲಿ ತಿಳಿಸಿರುತ್ತಾರೆ.
Meat sale banned on Mahashivratri day and alternate route for vehicular traffic in both directions
