SUDDILIVE || SHIVAMOGGA
ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ-Second PUC exam begins
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಇಙದಿನಿಮದ ಆರಂಭವಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೂ ಮುನ್ನ ಆಗಮಿಸಿದ್ದಾರೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಮಕ್ಕಳಿಗೆ ಆಲ್ ದಿ ಬೆಸ್ಟ್ ತಿಳಿಸಿದ್ದಾರೆ.
ಏಳು ತಾಲೂಕಗಳಾದ ಶಿವಮೊಗ್ಗದಲ್ಲಿ 17, ಭದ್ರಾವತಿಯಲ್ಲಿ 06, ತೀರ್ಥಹಳ್ಳಿ ಮತ್ತು ಹೊಸನಗರದಲ್ಲಿ ತಲಾ 03, ಸಾಗರ ಮತ್ತು ಶಿಕಾರಿಪುರದಲ್ಲಿ ತಲಾ 05 ಮತ್ತು ಸೊರಬದಲ್ಲಿ 02 ಪರೀಕ್ಷಾ ಕೇಂದ್ರಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 41ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ಒಟ್ಟು19009 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಇಂದು ಪ್ರಥಮ ಭಾಷೆ ಕನ್ನಡ ಪತ್ರಿಕೆಯಾಗಿದ್ದು 15300 ಮಕ್ಕಳು ಪರೀಕ್ಷೆಯನ್ನ ಎದುರಿಸುತ್ತಿದ್ದಾರೆ. ಈ 19009 ಜನರಲ್ಲಿ 7188ಬಾಲಕರು ಹಾಗೂ 10567ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 17,755ರೆಗ್ಯೂಲರ್‌ವಿದ್ಯಾರ್ಥಿಗಳು, 871 ಪುನರಾವರ್ತಿತ ಅಭ್ಯರ್ಥಿಗಳು, 380 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಯನ್ನ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಹಾಗೂ ಫಲಿತಾಂಶ ಸುಧಾರಣೆಗಾಗಿ 03ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ.
Second PUC exam begins
