SUDDILIVE || SHIVAMOGGA
ಮೂಲಸೌಕರ್ಯ ಒದಗಿಸುವಂತೆ ನಡೆಯುತ್ತಿರುವ ಹೋರಾಟ ನಾಲ್ಕನೇ ದಿನಕ್ಕೆ ಪಾದಾರ್ಪಣೆ- The ongoing struggle to provide basics facilities enters its fourth day
ಇತ್ತ ಯಾವ ಘನಂಧಾರಿಗೆ ಸಚಿವ ಕೃಷ್ಣಬೈರೇಗೌಡ ಶಿವಮೊಗ್ಗಕ್ಕೆ ಬರ್ತಿದ್ದರೋ ಗೊತ್ತಿಲ್ಲ. ಆದರೆ ಸ್ವಾತಂತ್ರ್ಯ ಸಿಕ್ಕು 80 ನೇ ವರ್ಷಕ್ಕೆ ಕಾಲಿಟ್ಟರೂ ಮೂಲಬೂತಸೌಕರ್ಯಕ್ಕಾಗಿ ಹೋರಾಟ ಮಾಡಬೇಕೆಂದರೆ ಸರ್ಕಾರದ ಸಚಿವರು ಮತ್ತು ಅಧಿಕಾರಿಗಳು ಯಾವ ಪುರುಷಾರ್ಥಕ್ಕೆ ಎಂಬ ಪ್ರಶ್ನೆ ಉದ್ಬವಿಸಿದೆ.
ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸಿಲ್ಲ ಎಂದು ಆರೊಪಿಸಿ ಶಿವಮೊಗ್ಗದ ಅರಬಿಳಚಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಗ್ರಾಮಸ್ಥರು. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಅರಬಿಳಚ್ಚಿ ಗ್ರಾಮದಲ್ಲಿ ಮೂಲ ಸೌಕರ್ಯಗಳು ಮರಿಚಿಕೆ ಆಗಿವೆ.
ಮನೆಗಳಿಗೆ ರಸ್ತೆ ಚರಂಡಿ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯ ಗಳನ್ನು ಕೊಡುವಂತೆ ಗ್ರಾಮಸ್ಥರು ಪಂಚಾಯಿತಿ ಕಚೇರಿಯ ಮುಂದೆ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಗಮನ ಹರಿಸಿ ಸಮಸ್ಯೆ ಬಗೆಹರಿಸುವಂತೆ . ಈ ವೇಳೆ ಸ್ಥಳಕ್ಕೆ ಭೇಟಿ ನೀಡಿ ಕೂಡಲೆ ಕ್ರಮ ಕೈಗೊಳ್ಳುವಂತೆ ಕೆ.ಪಿ.ಸಿ.ಸಿ ರಾಜ್ಯ ಪರಿಶಿಷ್ಟ ಜಾತಿ ವಿಭಾಗ ಸಂಚಾಲಕ ಮಂಜುನಾಥ್ ಆಗ್ರಹಿಸಿದರು.
The ongoing struggle to provide toilet facilities enters its fourth day
