ಸಾಗರದ ಉಳ್ಳೂರು ಬಳಿ ರಸ್ತೆ ಅಪಘಾತ, ಇಬ್ವರು ಸಾವು-Two killed in road accident near Ullur in Sagar

SUDDILIVE || SAGARA

ಸಾಗರದ ಉಳ್ಳೂರು ಬಳಿ ರಸ್ತೆ ಅಪಘಾತ, ಇಬ್ವರು ಸಾವು-Two killed in road accident near Ullur in Sagar 


ಸಾಗರ ಸಮೀಪದ ಉಳ್ಳೂರು ಗ್ರಾಮದ ಮುಂಡಿಗೆಮಟ್ಟೆ ರಸ್ತೆಯ ತಿರುವಿನಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ಯುವತಿ ಹಾಗೂ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.

ಆನಂದಪುರದಿಂದ ಸಾಗರಕ್ಕೆ ತೆರಳುತ್ತಿದ್ದ ಕಾರು ಹಾಗೂ ಸಾಗರದಿಂದ ಆನಂದಪುರದ ಕಡೆಗೆ ಬರುತ್ತಿದ್ದ ಕ್ಯಾಂಟರ್ ನಡುವೆ ಭಾನುವಾರ ರಾತ್ರಿ ಸುಮಾರು 10.30ರ ವೇಳೆಗೆ ಈ ಭೀಕರ ಅಪಘಾತ ಸಂಭವಿಸಿದೆ. 


ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.ಮೃತರನ್ನು ಪವಿತ್ರ (25) ತಂದೆ ಚನ್ನಬಸವಪ್ಪ, ಸೊರಬ ತಾಲ್ಲೂಕಿನ ಮಳಲಗದ್ದೆ ಗ್ರಾಮದ ನಿವಾಸಿ ಹಾಗೂ ವೀರೇಶ್ (25) ತಂದೆ ಸತೀಶ್, ಸಾಗರ ತಾಲ್ಲೂಕಿನ ತಡಗಳಲಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಪವಿತ್ರ ಯುವತಿಯಾಗಿದ್ದು, ವೀರೇಶ್ ಯುವಕನಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪವಿತ್ರ ಹಾಗೂ ವೀರೇಶ್ ಇಬ್ಬರೂ ಆಪ್ತ ಸ್ನೇಹಿತರಾಗಿದ್ದು, ಭಾನುವಾರ ಸಂಜೆ ಆನಂದಪುರದಲ್ಲಿ ಸ್ನೇಹಿತರೊಬ್ಬರ ಕಾರ್ಯಕ್ರಮಕ್ಕೆ ಹಾಜರಾಗಿ, ಕಾರ್ಯಕ್ರಮ ಮುಗಿಸಿಕೊಂಡು ಸಾಗರಕ್ಕೆ ಕಾರಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಪ್ರಾಥಮಿಕ ತನಿಖೆಯ ಪ್ರಕಾರ ಕ್ಯಾಂಟರ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Two killed in road accident near Ullur in Sagar

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close