SUDDILIVE || SHIVAMOGGA
ಪೋಕ್ಸೋ ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ-Accused in POCSO case sentenced to 20 years in prison
ಅಪ್ರಾಪ್ತೆಯನ್ನ ಪರಿಚಯಿಸಿಕೊಂಡು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿದವನ ವಿರುದ್ಧ 20 ವರ್ಷ ಕಾರಾಗೃಹ ಶಿಕ್ಷೆ 1 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1). ತೀರ್ಪು ನೀಡಿದೆ.
23 ವರ್ಷ ವಯಸ್ಸಿನ ಶಿರಾಳಕೊಪ್ಪದ ವಾಸಿಯೊಬ್ಬನು, 16 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪರಿಚಯ ಮಾಡಿಕೊಂಡು, ಮದುವೆ ಮಾಡಿಕೊಳ್ಳುತ್ತೇನೆ ಎಂದು ಪುಸಲಾಯಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಈ ಬಗ್ಗೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ, ಲೈಂಗಿಕ ದೌರ್ಜನ್ಯ, ಪೋಕ್ಸೋ ಕಾಯ್ದೆ ಮತ್ತು ಎಸ್.ಸಿ ಮತ್ತು ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಕೇಶವ ಕೆ. ವಿ ಡಿವೈಎಸ್ಪಿ ಶಿಕಾರಿಪುರ ರವರು ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿತನ ವಿರುದ್ಧ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.
ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಶ್ರೀಧರ್ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1) ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ಶ್ರೀ ನಿಂಗನಗೌಡ ಭ ಪಾಟೀಲ್ ರವರು ದಿನಾಂಕ: 10-03-2026 ರಂದು ಆರೋಪಿತನಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ 1,00,000 /- ದಂಡವನ್ನು ವಿಧಿಸಿದ್ದು, ಜೊತೆಗೆ ದಿವಂಗತ ನೊಂದ ಬಾಲಕಿ ಕುಟುಂಬದವರಿಗೆ ಸರ್ಕಾರದ ವತಿಯಿಂದ 4,00,000/- ರೂ ಪರಿಹಾರವನ್ನು ನೀಡಿ ಆದೇಶಿಸಿರುತ್ತದೆ.
Accused in POCSO case sentenced to 20 years in prison
