ಮಾವನನ್ನೇ ಕುತ್ತಿಗೆಸೀಳಿ ಹತ್ಯೆಗೆ ಯತ್ನ-Attempt to murder uncle by slitting his throat

 SUDDILIVE || SHIVAMOGGA

ಮಾವನನ್ನೇ ಕುತ್ತಿಗೆಸೀಳಿ ಹತ್ಯೆಗೆ ಯತ್ನ-Attempt to murder uncle by slitting his throat    

Attempt, slitting

ತಾಲೂಕಿನ ಬಿಳಿಕಿ ಗ್ರಾಮದಲ್ಲಿ ಅಳಿಯನೆ ತನ್ನ ಮಾವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚನ್ನಾನಾಯ್ಕ (72) ಎಂಬುವವರ ಕುತ್ತಿಗೆ ಸೀಳಿ ಕೊಲೆ ಮಾಡಲು ಯತ್ನಿಸಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಕುಡಿದ ಮತ್ತಿನಲ್ಲಿ ಅಳಿಯ ಮಾಲತೇಶ್ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ದಾಳಿಯಿಂದಾಗಿ ಗಂಭೀರವಾಗಿ ಗಾಯಗೊಂಡಿರುವ ಚನ್ನಾನಾಯ್ಕ ಅವರನ್ನು ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಾಲತೇಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Attempt to murder uncle by slitting his throat 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close