ನಾಯಿ ಅಡ್ಡ ಬಂದು ಬೈಕ್ ಅಪಘಾತ - ಯುವಕ ಸಾವು-Bike accident due to dog crossing - young man dies

SUDDILIVE || RIPPONPETE

ನಾಯಿ ಅಡ್ಡ ಬಂದು ಬೈಕ್ ಅಪಘಾತ - ಯುವಕ ಸಾವು-Bike accident due to dog crossing - young man dies     

Bike, accident

ಇಲ್ಲಿನ ಸಾಗರ ರಸ್ತೆಯ ಕೆಇಬಿ ಕಚೇರಿ ಮುಂಭಾಗದಲ್ಲಿ ಬೈಕ್‌ಗೆ ನಾಯಿ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೃತರನ್ನು ಕೆರೆಹಳ್ಳಿ ನಿವಾಸಿ ಮಂಜುನಾಥ್ (35) ಎಂದು ಗುರುತಿಸಲಾಗಿದೆ.ಮಂಗಳವಾರ ರಾತ್ರಿ ಮನೆಗೆ ತೆರಳುತ್ತಿದ್ದ ವೇಳೆ ಸಾಗರ ರಸ್ತೆಯ ಕೆಇಬಿ ಮುಂಭಾಗದಲ್ಲಿ ಏಕಾಏಕಿ ನಾಯಿ ಅಡ್ಡ ಬಂದ ಪರಿಣಾಮ ಮಂಜುನಾಥ್ ಚಾಲನೆ ಮಾಡುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಬಿದ್ದಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯಿಂದ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ತಕ್ಷಣವೇ ರಿಪ್ಪನ್‌ಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಿದ್ದರು. ಆದರೆ ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಸ್ಥಿತಿ ಚಿಂತಾಜನಕವಾಗಿದ್ದ ಹಿನ್ನಲೆಯಲ್ಲಿ  ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲು ವೈದ್ಯರು ಸಲಹೆ ನೀಡಿದ್ದರು. ಮಣಿಪಾಲ್‌ಗೆ ಕರೆದೊಯ್ಯುವಷ್ಟರಲ್ಲಿ ಮಂಜುನಾಥ್ ಅವರು ಪ್ರಾಣ ಕಳೆದುಕೊಂಡಿದ್ದಾರೆ.

ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ. ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Bike accident due to dog crossing - young man dies

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close