ಸಂಸದರಿಗೆ ಈಶ್ವರಪ್ಪ ಅಭಿನಂದನೆ- Eshwarappa congratulates MPs

 SUDDILIVE || SHIVAMOGGA

ಸಂಸದರಿಗೆ ಈಶ್ವರಪ್ಪ ಅಭಿನಂದನೆ- Eshwarappa congratulates MPs    


ಜಿಲ್ಲೆಯ ಪರಿಸರ ಸಂರಕ್ಷಣೆ ಮತ್ತು ಪಶ್ಚಿಮ ಘಟ್ಟಗಳ ಉಳಿವಿಗಾಗಿ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸಿರುವ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ವಿವಾದಿತ ಯೋಜನೆಗೆ ಕೇಂದ್ರ ಸರ್ಕಾರ ಇದುವರೆಗೆ ಅನುಮತಿ ನೀಡಿಲ್ಲ ಎಂಬ ಸಂಸದರ ಹೇಳಿಕೆಯನ್ನು ಅವರು ಸ್ವಾಗತಿಸಿದ್ದಾರೆ. 

ಇಂದು ಈ ಕುರಿತು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ತಜ್ಞರ ಸಮಿತಿಯು ಸದರಿ ಯೋಜನೆಯು ಆರ್ಥಿಕವಾಗಿ ಲಾಭದಾಯಕವಲ್ಲ ಎಂದು ವರದಿ ನೀಡಿದೆ. ಅಲ್ಲದೆ, ಕೇಂದ್ರ ವನ್ಯಜೀವಿ ಮಂಡಳಿಯ ಐಎಫ್‌ಎಸ್ ಅಧಿಕಾರಿ ಪ್ರಣೀತಾ ಕೌರ್ ಅವರು ಅಧ್ಯಯನ ನಡೆಸಿ, ಯೋಜನೆಯಿಂದ ಅಪಾರ ಪರಿಸರ ನಾಶವಾಗುವುದರಿಂದ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಶಿಫಾರಸು ಮಾಡಿರುವುದು ಪರಿಸರ ಪ್ರೇಮಿಗಳಿಗೆ ಜಯ ಸಿಕ್ಕಂತಾಗಿದೆ ಎಂದು ಈಶ್ವರಪ್ಪ ತಿಳಿಸಿದರು.

ಈ ಯೋಜನೆಯ ವಿರುದ್ಧ ಬಂಗಾರಮಕ್ಕಿಯ ಮಾರುತಿ ಗುರೂಜಿ, ಮೂಲೆಗದ್ದೆಯ ಅಭಿನವ ಚನ್ನಬಸವ ಸ್ವಾಮೀಜಿ, ಬೆಕ್ಕಿನಕಲ್ಪಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ಸೇರಿದಂತೆ ಅನೇಕ ಗಣ್ಯರು ಹಾಗೂ ಪರಿಸರ ಹೋರಾಟಗಾರರಾದ ಎ.ಟಿ.ರಾಮಸ್ವಾಮಿ, ಸಂಜಯ್ ಗುಬ್ಬಿ ಅವರು ನಡೆಸಿದ ಸತ್ಯಾಗ್ರಹಗಳು ಕೇಂದ್ರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿವೆ. ನ್ಯಾಯಾಲಯ ಕೂಡ ಸದ್ಯಕ್ಕೆ ಯಾವುದೇ ಚಟುವಟಿಕೆ ನಡೆಸದಂತೆ ನಿರ್ಬಂಧ ಹೇರಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. 

ಪಶ್ಚಿಮ ಘಟ್ಟಗಳ ಮೇಲಾಗುವ ದುಷ್ಪರಿಣಾಮಗಳ ಕುರಿತು ಪರಿಸರ ಹೋರಾಟಗಾರರ ನಿಯೋಗವು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲು ಬಯಸಿದೆ. ಈ ನಿಟ್ಟಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಪ್ರಧಾನಿಗಳ ಭೇಟಿಗೆ ಸಮಯ ನಿಗದಿಪಡಿಸಿಕೊಡಬೇಕು ಎಂದು ಈಶ್ವರಪ್ಪ ಮನವಿ ಮಾಡಿದರು.

Eshwarappa congratulates MPs

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close