SUDDILIVE || SAGARA
ಆಸ್ಪತ್ರೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ- Fire in a car parked in front of the hospital
ಪಟ್ಟಣದ ತಾಯಿ ಮತ್ತು ಮಗು ಆಸ್ಪತ್ರೆಯ ಮುಂಭಾಗ ನಿಲ್ಲಿಸಲಾಗಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುಟ್ಟು ಹೋಗಿದೆ. ಆಸ್ಪತ್ರೆಯ ಮುಂಭಾಗ ನಿಂತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣೆವೆ ವಾಹನದ ಮುಂಭಾಗ ಹೊತ್ತಿ ಉರಿದಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ಹತ್ತಿಕೊಂಡಿದ್ದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಸಾಗರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಈ ವಾಹನ ಸಚಿನ್ ಶಿರವಾಳ ಎಂಬುವರಿಗೆ ಸೇರಿದ್ದಾಗಿದೆ. ಸಚಿನ್ ಶರವಾಳ ಅವರು ತಾಯಿ ಮತ್ತು ಮಗು ಆಸ್ಪತ್ರೆಯಲ್ಲಿರುವ ಟಿಹೆಚ್ ಒ ಆಸ್ಪತ್ರೆಯಲ್ಲಿ ಕೆಲಸಗಾರರಾಗಿದ್ದು ವಾಹನ ನಿಲ್ಲಿಸಿ ಕಚೇರಿಗೆ ತೆರಳಿದಾಗ ಈ ಘಟನೆ ನಡೆದಿದೆ.
Fire in a car parked in front of the hospital

