SUDDILIVE || SHIVAMOGGA
ಭಟ್ಕಳದ ಮಹಿಳೆ ಸೇರಿ ನಾಲ್ವರು ಕಳ್ಳರ ಬಂಧನ-Four thieves, including a woman, arrested from Bhatkal
ಮನೆಯೊಂದರ ಬೀಗ ಮುರಿದು ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ಹೊಸನಗರ ತಾಲೂಕು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 7,90,000 ಮೌಲ್ಯದ ಚಿನ್ನದ ಸರ, ಬ್ರೇಸ್‌ಲೆಟ್, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
2025ರ ಡಿಸೆಂಬರ್ 27 ರಂದು ಹೊಸನಗರ ತಾಲೂಕಿನ ನಿಟ್ಟೂರು ನಾಗೋಡಿ ಗ್ರಾಮದ ನಿವಾಸಿ ರಾಜೇಂದ್ರ ಶೆಟ್ಟಿ ಎಂಬುವವರ ಮನೆಯ ಮುಂಬಾಗಿಲ ಬೀಗವನ್ನು ಮುರಿದು ಕಳ್ಳರು ಒಳ ನುಗ್ಗಿದ್ದರು. ಮನೆಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತಾಂತ್ರಿಕ ಸಹಕಾರ ಮತ್ತು ಬೆರಳಚ್ಚು ವಿಭಾಗದ ನೆರವಿನೊಂದಿಗೆ ಭಟ್ಕಳ ಮೂಲದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಇಮ್ರಾನ್ ಇಕ್ಕೇರಿ (25), ಮಹಮ್ಮದ್ ಅಖೀಲ್ (24), ಅಮೀರ್ ಹಸನ್ ಬ್ಯಾರಿ (29), ಬೇಬಿ ಹಾಜಿರ (55) ಬಂಧಿತರು.
ಆರೋಪಿಗಳಿಂದ 3,87,000 ಮೌಲ್ಯದ 30 ಗ್ರಾಂ ತೂಕದ ಬಂಗಾರದ ನೆಕ್ಲಸ್, 93,000 ಮೌಲ್ಯದ 6 ಗ್ರಾಂ ತೂಕದ ಬಂಗಾರದ ಬ್ರಾಸ್‌ಟ್, 50 ಗ್ರಾಂ ಬೆಳ್ಳಿಯ ವಸ್ತುಗಳು ಹಾಗೂ ಮೊಬೈಲ್ ಫೋನ್, ಕೃತ್ಯಕ್ಕೆ ಬಳಸಿದ ಇಟಿಯೋಸ್ ಕಾರು ವಶಕ್ಕೆ ಪಡೆಯಲಾಗಿದೆ. ಪಿಎಸ್ ಐ ಶಿವಾನಂದ ಕೋಳಿ ನೇತೃತ್ವದ ತಂಡ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದೆ.
Four thieves, including a woman, arrested from Bhatkal

