SUDDILIVE || SAGARA
ಲಾರಿ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ-Head-on collision between a lorry and a car
ನಗರದ ಪ್ರಮುಖ ಜಂಕ್ಷನ್ ಆದ ವಿನಾಯಕ ವೃತ್ತದಲ್ಲಿ ಗುರುವಾರ ಬೆಳಿಗ್ಗೆ ಲಾರಿ ಮತ್ತು ಕಾರಿನ ನಡುವೆ ಭೀಕರ ಅಘಾತ ಸಂಭವಿಸಿದೆ.
ಹೊಸನಗರ ರಸ್ತೆಯಿಂದ ಶಿವಮೊಗ್ಗದ ಕಡೆಗೆ ಹೆಚ್‌ಪಿ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತು ಸಾಗುತ್ತಿದ್ದಲಾರಿ ಹಾಗೂ ತೀರ್ಥಹಳ್ಳಿ ರಸ್ತೆಯಿಂದ ಸಾಗರ ರಸ್ತೆಯ ಕಡೆಗೆ ಚಲಿಸುತ್ತಿದ್ದ ಕಾರಿನ ನಡುವೆ ಈ ಅಪಘಾತ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಜುಗಳು ಪುಡಿಯಾಗಿ ರಸ್ತೆಯುದ್ದಕ್ಕೂ ಹರಡಿದ್ದವು. ಈ ಘಟನೆಯಿಂದಾಗಿ ನಗರದ ಹೃದಯಭಾಗದಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.
ಅಪಘಾತಕ್ಕೀಡಾದ ಕಾರಿನಲ್ಲಿದ್ದ ಪ್ರಯಾಣಿಕ ಸಾಗರ ಸಮೀಪದ ತೊಗರ್ಸಿ ಗ್ರಾಮದ ಮೂಲದವರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ವಾಹನ ಭಾರಿ ಹಾನಿಯಾಗಿದ್ದರೂ, ಒಳಗಿದ್ದ ಪ್ರಯಾಣಿಕರು ಯಾವುದೇ ಗಂಭೀರ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸಾಗರ ಪೊಲೀಸರು ವಾಹನಗಳನ್ನು ಪರಿಶೀಲಿಸಿ, ಜಖಂಗೊಂಡ ವಾಹನಗಳನ್ನು ತೆರವುಗೊಳಿಸಿ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಿದರು.
Head-on collision between a lorry and a car
