SUDDILIVE || SHIVAMOGGA
ಈದ್ಗಾ ಮೈದಾನಕ್ಕೆ ಬ್ಯಾರಿಕೇಡ್ ಹಿಂದೂ ಸಂಘಟನೆಯ ಆಕ್ಷೇಪ- Hindu organization objects to barricade at Eidgah ground
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಈದ್ಗಾ ಮೈದಾನದ ವಿಚಾರ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಮುಂಬರುವ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಮೈದಾನದ ಸ್ವಚ್ಛತೆಗಾಗಿ ಬ್ಯಾರಿಕೇಡ್ ಅಳವಡಿಸಿರುವುದನ್ನು ವಿರೋಧಿಸಿ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಮಾರ್ಚ್ 20 ರಂದು ರಂಜಾನ್ ಹಬ್ಬ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೈದಾನವನ್ನು ಸಿದ್ಧಪಡಿಸಿಕೊಡುವಂತೆ ಮುಸ್ಲಿಂ ಸಂಘಟನೆಗಳು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದವು. ಈ ಕೋರಿಕೆಯ ಮೇರೆಗೆ ಪಾಲಿಕೆಯು ಇಂದು ಮೈದಾನದ ಸುತ್ತ ಬ್ಯಾರಿಕೇಡ್ ಹಾಕಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿತ್ತು. ಆದರೆ, ಹಬ್ಬಕ್ಕೆ ಇನ್ನೂ ಮೂರು ದಿನ ಬಾಕಿ ಇರುವಾಗಲೇ ಬ್ಯಾರಿಕೇಡ್ ಹಾಕಿರುವುದರಿಂದ ಸಾರ್ವಜನಿಕ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಸ್ಥಳಕ್ಕಾಗಮಿಸಿ ಆಕ್ಷೇಪ ವ್ಯಕ್ತಪಡಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಶಿವಮೊಗ್ಗ ಎಸ್ಪಿ ನಿಖಿಲ್ ಬಿ., ಪಾರ್ಕಿಂಗ್ ಸಮಸ್ಯೆಯಾಗದಂತೆ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಯುಗಾದಿ ಹಬ್ಬದ ಕಾರಣ ಕೆಲಸಗಾರರ ಕೊರತೆ ಎದುರಾಗಬಹುದು ಎಂಬ ಮುನ್ನೆಚ್ಚರಿಕೆಯಿಂದ ಮುಂಚಿತವಾಗಿ ಸ್ವಚ್ಛತೆ ಆರಂಭಿಸಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತು ಶಾಂತಿಯುತವಾಗಿ ಹಬ್ಬ ಆಚರಿಸಲು ಎಲ್ಲಾ ಮುಖಂಡರು ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
Hindu organization objects to barricade at Eidgah ground

