SUDDILIVE || HOLEHONNURU
ಬೆಂಕಿಯಲ್ಲಿ ಉರಿಯುತ್ತಿರುವ ಸ್ಥತಿಯಲ್ಲಿ ಉಪನ್ಯಾಸಕರ ಮೃತ ದೇಹ ಪತ್ತೆ- Lecturer's body found burning in fire
ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರವತಿ ತಾಲೂಕಿ ಹೊಳೆಹೊನ್ನೂರು ಸಮೀಪದ ಹನುಮಂತಪುರದಲ್ಲಿ ಘಟನೆ ನಡೆದಿದೆ.
ಅಡಿಕೆ ತೋಟದಲ್ಲಿ ಖಾಸಗಿ ಕಾಲೇಜು ಉಪನ್ಯಾಸಕರೊಬ್ಬರ ಮೃತದೇಹ ಪತ್ತೆಯಾಗಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರನ್ನು ಉಪನ್ಯಾಸಕ ಸುರೇಶ್ (58) ಎಂದು ಗುರುತಿಸಲಾಗಿದೆ. ತೋಟದಲ್ಲಿ ಸುರೇಶ್ ಅವರ ಮೃತದೇಹವು ಸಂಪೂರ್ಣ ಸುಟ್ಟು ಕರಕಲಾಗಿದೆ.
ಸ್ಥಳೀಯರು ಗಮನಿಸಿದಾಗ ಮೃತದೇಹವು ಬಳಿ ಇನ್ನು ಬೆಂಕಿ ಉರಿಯುತ್ತಿತ್ತು. ಕೂಡಲೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಸ್ಥಿತಿ ಬಗ್ಗೆ ಅವಲೋಕಿಸಿದ್ದಾರೆ. ಘಟನೆ ಕುರಿತು ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.
ಆತ್ಮಹತ್ಯೆಯೋ ಕೊಲೆಯೋ ತನಿಖೆಯಿಂದ ತಿಳಿಯ ಬೇಕಿದೆ. ಸ್ಥಳೀಯರು ಸ್ಥಳಕ್ಕೆ ಭೇಟಿ ನೀಡಿದಾಗ ಉಪನ್ಯಾಸಕರ ಮೃತ ದೇಹ ಇನ್ನು ಬೆಂಕಿಯಲ್ಲಿ ಉರಿಯುತ್ತಿತ್ತು.
Lecturer's body found burning in fire

