ನಾಪತ್ತೆಯಾಗಿದ್ದ ಧನುಷ್ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ- Missing Dhanush found dead in a decomposed state

 SUDDILIVE || RIPPONPETE

ನಾಪತ್ತೆಯಾಗಿದ್ದ ಧನುಷ್ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ- Missing Dhanush found dead in a decomposed state

ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.

ಮೃತರನ್ನು ಹುಂಚ ಸಮೀಪದ ಮಾರ್ನಮಿಬೈಲು ನಿವಾಸಿ  ಧನುಷ್ ಎನ್.ಎಸ್. (25) ಎಂದು ಗುರುತಿಸಲಾಗಿದೆ.ಧನುಷ್ ಕಳೆದ 19-01-2026 ರಂದು ಮನೆಯಿಂದ ಹೊರಟು ಹೋದ ಅವರು ನಂತರ ಮರಳಿ ಮನೆಗೆ ಬಂದಿರಲಿಲ್ಲ. ಈ ಬಗ್ಗೆ ಕುಟುಂಬದವರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.


ಇದೀಗ ಯುವಕನ ಮೃತದೇಹ 5MS ಪ್ರದೇಶದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ. ಯುವಕನ ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. 

ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Missing Dhanush found dead in a decomposed state

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close