ಮಾದಕವಸ್ತುಗಳನ್ನ ನಿಯಂತ್ರಿಸಲಾಗುವುದು-ಮಧು ಬಂಗಾರಪ್ಪ-Narcotics will be controlled - Madhu Bangarappa

SUDDILIVE || SHIVAMOGGA

ಮಾದಕವಸ್ತುಗಳನ್ನ ನಿಯಂತ್ರಿಸಲಾಗುವುದು-ಮಧು ಬಂಗಾರಪ್ಪ-Narcotics will be controlled - Madhu Bangarappa    

Narcotics, Madhubangarappa


ಮಾದಕ ವಸ್ತುಗಳ ಹೆಚ್ಚಳಕ್ಕೆ ಬ್ರೇಕ್ ಹಾಕಲಾಗುವುದು. ಈ ಮಾದಕ ವಸ್ತುಗಳು ಹೊರರಾಜ್ಯದಿಂದ ಆಮದಾಗಿದೆ. ಇದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ನಿಯಂತ್ರಿಸಬೇಕಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. 

ಶಿವಮೊಗ್ಗ ಏರ್ ಪೋರ್ಟ್ ನಲ್ಲಿ ಮಾತನಾಡಿದ ಅವರು, ಮೃತ ಸಂಕೇತ್‌ನ ಕುಟುಂಬದವರಿಗೆ ಸರ್ಕಾರದಿಂದ ಅಗತ್ಯ ನೆರವು, ಸಹಕಾರ ನೀಡಲಾಗುವುದು. ಅಲ್ಲದೇ ಅವರ ಮನೆಗೆ ತೆರಳಿ ಸಾಂತ್ವನ ಹೇಳಲಾಗುವುದು ಎಂದರು.

ಮಕ್ಕಳ ಶೈಕ್ಷಣಿಕ ಹಿತದೃಷ್ಠಿಯಿಂದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಪ್ರತಿದಿನ ಸಂಜೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದ್ದು, ತರಗತಿಯ ನಂತರ ವಿದ್ಯಾರ್ಥಿಗಳು ಸಕಾಲದಲ್ಲಿ ಮನೆಗೆ ಸುರಕ್ಷಿತವಾಗಿ ಹಿಂದಿರುಗುವ ಬಗ್ಗೆ ಪೋಷಕರು ಗಮನಹರಿಸಬೇಕು. ಜಿಲ್ಲೆ, ರಾಜ್ಯ ಮಾತ್ರವಲ್ಲ ದೇಶದಾದ್ಯಂತ ಮಾದಕ ವಸ್ತುಗಳ ಸರಬರಾಜು, ಸಾಗಾಣಿಕೆ ಮತ್ತು ಬಳಕೆ ಬಗ್ಗೆ ನಿಯಂತ್ರಣ ಕಾರ್ಯಗಳಾಗಬೇಕು. 

ಇಂತಹ ಅಕ್ರಮಗಳಲ್ಲಿ ತೊಡಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಪೊಲೀಸ್‌ವರಿಷ್ಠಾಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಜಿಲ್ಲಾ ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಲಾಗಿದೆ ಆದರೆ, ಅವರನ್ನು ಕಠಿಣ ಶಿಕ್ಷೆಗೆ, ದಂಡನೆಗೆ ಗುರಿಪಡಿಸಬೇಕು ಎಂದ ಅವರು, ಈ ಸಂಬಂಧ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಶಿಕ್ಷಕರೊಬ್ಬರ ಮೇಲೆ ಫೋಕ್ಸೋ ಪ್ರಕರಣವೊಂದು ದಾಖಲಾಗಿದೆ. ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇತ್ತೀಚೆಗೆ ಖಾಸಗಿ ಬಸ್ ಅಗ್ನಿ ಅವಘಡಕ್ಕೆ ತುತ್ತಾಗಿರುವುದು ಕಂಡುಬಂದಿದೆ. ಖಾಸಗಿ ವಾಹನಗಳ ಸುರಕ್ಷತಾ ಪ್ರಯಾಣಕ್ಕೆ ಸಂಬಂಧಿಸಿದಂತೆ ಸಾರಿಗೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸುವುದಾಗಿ ಅವರು ತಿಳಿಸಿದರು.

ನಿನ್ನೆಯಷ್ಟೆ ದ್ವಿತೀಯ ಪಿ.ಯು.ಸಿ. ವಾರ್ಷೀಕ ಪರೀಕ್ಷೆಗಳು ಆರಂಭಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳಿಲ್ಲದಂತೆ ವ್ಯವಸ್ಥಿತವಾಗಿ ಮುಂದುವರೆದಿದೆ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವಂತೆ ಶುಭ ಹಾರೈಸಿರುವುದಾಗಿ ಅವರು ತಿಳಿಸಿದರು.

1995ರ ನಂತರ ಖಾಸಗಿ ಕನ್ನಡ ಶಾಲೆಗಳನ್ನು ಅನುದಾನದ ವ್ಯಾಪ್ತಿಗೊಳಪಡಿಸುವ ವಿಷಯವನ್ನು ಪ್ರಸಕ್ತ ಬಜೆಟ್‌ನಲ್ಲಿ ಸೇರ್ಪಡೆಗೊಳಿಸುವ ಸಂಬಂಧ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಅಲ್ಲದೇ ಅದಕ್ಕಾಗಿ ಅಗತ್ಯವಿರುವ ಅನುದಾನವನ್ನು ಹಣಕಾಸು ಇಲಾಖೆಗೆ ಬಿಡುಗಡೆಗೆ ಕ್ರಮ ವಹಿಸಬೇಕಾಗುವುದು. ಈ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ವೇಗಹೆಚ್ಚಿಸಲು ಸೂಚಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದ ಆರಂಭದಿಂದಲೇ ನೂತನ ಶಿಕ್ಷಕರ ಸೇವೆಯನ್ನು ಬಳಸಿಕೊಳ್ಳುವ ಆಶಯ ತಮಗಿದೆ ಎಂದರು.

ಕರ್ನಾಟಕ ಪಬ್ಲಿಕ್‌ಶಾಲೆಗಳ ಉದ್ಘಾಟನೆ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿ ಬಜೆಟ್‌ನಂತರದಲ್ಲಿ ಆಯೋಜಿಸುವ ಉದ್ದೇಶ ಹೊಂದಲಾಗಿದೆ ಎಂದ ಅವರು, ಇದೇ ಅವಧಿಯಲ್ಲಿ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಉದ್ದೇಶಿಸಲಾಗಿದೆ ಎಂದರು.ಈ ಸಂದರ್ಭದಲ್ಲಿ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

Narcotics will be controlled - Madhu Bangarappa

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close