SUDDILIVE || SHIVAMOGGA
ಮೀಸಲಾತಿ ಜಾರಿಗೆ ಆಗ್ರಹಿಸಿ ಜಿಲ್ಲಾ ಮಾದರ ಮಹಾಸಭಾ ವತಿಯಿಂದ ಪ್ರತಿಭಟನಾ ಮೆರವಣಿಗೆ-Protest march by District Madara Mahasabha demanding implementation of reservation
ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಇಂದು ಶಿವಮೊಗ್ಗ ಜಿಲ್ಲಾ ಮಾದಾರ ಮಹಾಸಭಾದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರ ಒಳ ಮೀಸಲಾತಿ ಕಲ್ಪಿಸುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು. ಸಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ತಲಾತಲಾಂತರಗಳಿಂದ ಶೋಷಣೆಗೆ ಒಳಗಾಗುತ್ತಾ ಅವಕಾಶ ವಂಚಿತಗೊಂಡಿರುವ ಮಾದಿಗ ಸಮುದಾಯ ತಮ್ಮ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಕಲ್ಪಿಸುವಂತೆ ಕಳೆದ 35 ವರ್ಷಗಳಿಂದ ನಡೆಸಿದ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಅಸ್ತು ಅಂದಿದೆ. ಆದರೆ ಸುಪ್ರಿಂ ಕೋರ್ಟ್ ಆದೇಶವನ್ನು ರಾಜ್ಯ ಸರ್ಕಾರ ಕಳೆದ ಒಂದೂವರೆ ವರ್ಷಗಳಿಂದ ಜಾರಿ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ಇದರಿಂದ ರಾಜ್ಯ ಸರ್ಕಾರ ತಕ್ಷಣ ಒಳಮೀಸಲಾತಿಯನ್ನು ಜಾರಿ ಮಾಡಬೇಕೆಂದು ಅಗ್ರಹಿಸಿದರು.
ರಾಜ್ಯ ಸರ್ಕಾರ ಒಳಮೀಸಲಾತಿ ಇಲ್ಲದೇ 56342 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಅಸ್ಪಶ್ಯ ಜಾತಿಗಳ ಪಾಲಿಗೆ ಮರಣ ಶಾಸನ ಮತ್ತು ಸಾಮಾಜಿಕ ನ್ಯಾಯದ ಮಹಾ ವಂಚನೆಯೇ ಆಗಲಿದೆ.ಇದರಿಂದ ಶಿವಮೊಗ್ಗ ಜಿಲ್ಲಾ ಮಾದಾರಾ ಮಹಾಸಭ ಖಂಡಿಸುತ್ತದೆ ಎಂದು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಇದಕ್ಕೂ ಮುನ್ನಾ ಮಹಾನಗರ ಪಾಲಿಕೆ ಮುಂಭಾಗದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ,ಶಿವಪ್ಪನಾಯಕ ವೃತ್ತದ ಮೂಲಕ ಅಮಿರ್ ಅಹಮದ್ ವೃತ್ತದಿಂದ ನೆಹರು ರಸ್ತೆಯ ಮೂಲಕ ಟಿ.ಸೀನಪ್ಪ ಶೆಟ್ಟಿ ವೃತ್ತದಿಂದ ಬಾಲರಾಜ್ ಅರಸ್ ರಸ್ತೆಯಿಂದ ಸಾಗಿ ಮಹಾವೀರ ವೃತ್ತದ ಜಿಲ್ಲಾಧಿಕಾರಿಗಳ ಕಚೇರಿಯನ್ನು ತಲುಪಲಾಯಿತು.
Protest march by District Madara Mahasabha demanding implementation of reservation
