RIPPONPETE | ವಿನಾಯಕ ವೃತ್ತದಲ್ಲಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ - ಕಾರು ಜಖಂ-RIPPONPETE | Collision between car and lorry at Vinayak Circle - Car damaged

SUDDILIVE ||  RIPPONPETE

ವಿನಾಯಕ ವೃತ್ತದಲ್ಲಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ - ಕಾರು ಜಖಂ-RIPPONPETE | Collision between car and lorry at Vinayak Circle - Car damaged     

Ripponpete, damage

ಪಟ್ಟಣದ ವಿನಾಯಕ ವೃತ್ತದಲ್ಲಿ ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಹೊಸನಗರ ರಸ್ತೆಯಿಂದ ಶಿವಮೊಗ್ಗ ಕಡೆಗೆ ತೆರಳುತಿದ್ದ ಎಚ್‌ಪಿ ಗ್ಯಾಸ್ ಸಾಗಿಸುತ್ತಿದ್ದ ಲಾರಿ ಹಾಗೂ ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ತೆರಳುತಿದ್ದ ಕಾರಿನ ನಡುವೆ ಸಂಭವಿಸಿದ ಅಪಘಾತದಿಂದ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನ ಗಾಜುಗಳು ಪುಡಿಯಾಗಿವೆ. ಘಟನೆಯ ಪರಿಣಾಮವಾಗಿ ಕೆಲಕಾಲ ವಾಹನ ಸಂಚಾರದಲ್ಲಿ ಅಸ್ತವ್ಯಸ್ತತೆ ಉಂಟಾಯಿತು.

ಕಾರು ಪ್ರಯಾಣಿಕರು ಸಾಗರ ಸಮೀಪದ ತೊಗರ್ಸಿ ಮೂಲದವರೆಂದು ಹೇಳಲಾಗುತ್ತಿದೆ.ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ವಾಹನಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಸಂಚಾರವನ್ನು ಸುಗಮಗೊಳಿಸಿದರು.


ವಿನಾಯಕ ವೃತ್ತದಲ್ಲಿ ಸುರಕ್ಷತಾ ಕ್ರಮಗಳ ಕೊರತೆ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ರಿಪ್ಪನ್‌ಪೇಟೆ ಪಟ್ಟಣದ ಪ್ರಮುಖ ಸಂಪರ್ಕ ಕೇಂದ್ರವಾಗಿರುವ ವಿನಾಯಕ ವೃತ್ತದಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಸೂಕ್ತ ವ್ಯವಸ್ಥೆಗಳ ಕೊರತೆ ಕಂಡುಬರುತ್ತಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಈ ವೃತ್ತದಲ್ಲಿ ನಾಲ್ಕು ಪ್ರಮುಖ ರಸ್ತೆಗಳು ಒಂದೇ ಸ್ಥಳದಲ್ಲಿ ಕೂಡಿಕೊಳ್ಳುವುದರಿಂದ ದಿನದ ಹೆಚ್ಚಿನ ಸಮಯದಲ್ಲಿ ವಾಹನ ಸಂಚಾರ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇಲ್ಲಿ ಸರಿಯಾದ ವೇಗ ನಿಯಂತ್ರಣ ಹಂಪ್‌ಗಳು, ಬ್ಯಾರಿಕೇಡ್‌ಗಳು ಅಥವಾ ಎಚ್ಚರಿಕೆ ಸೂಚಕ ಫಲಕಗಳ ಕೊರತೆ ಇರುವುದರಿಂದ ವಾಹನಗಳು ಅತೀ ವೇಗವಾಗಿ ಸಂಚರಿಸುತ್ತಿರುವುದು ಸಾಮಾನ್ಯವಾಗಿದೆ.

ವಿಶೇಷವಾಗಿ ಲಾರಿಗಳು, ಕಾರುಗಳು ಹಾಗೂ ದ್ವಿಚಕ್ರ ವಾಹನಗಳು ಯಾವುದೇ ನಿಯಂತ್ರಣವಿಲ್ಲದೆ ವೇಗವಾಗಿ ವೃತ್ತವನ್ನು ದಾಟುತ್ತಿರುವುದರಿಂದ ಅಪಘಾತಗಳ ಸಂಭವ ಹೆಚ್ಚಾಗುತ್ತಿದೆ. ಇತ್ತೀಚೆಗೆ ನಡೆದ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಡಿಕ್ಕಿ ಘಟನೆ ಈ ಸಮಸ್ಯೆಯನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ. ಅದೃಷ್ಟವಶಾತ್ ಈ ಬಾರಿ ಪ್ರಾಣಾಪಾಯ ಸಂಭವಿಸದಿದ್ದರೂ, ಮುಂದಿನ ದಿನಗಳಲ್ಲಿ ಇದೇ ರೀತಿಯ ನಿರ್ಲಕ್ಷ್ಯ ಮುಂದುವರಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇರುವುದನ್ನು ಸ್ಥಳೀಯರು ಸೂಚಿಸುತ್ತಿದ್ದಾರೆ.

ಸ್ಥಳೀಯ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಹಲವು ಬಾರಿ ಈ ಸಮಸ್ಯೆಯ ಕುರಿತು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದಿದ್ದರೂ ಶಾಶ್ವತ ಪರಿಹಾರ ಕಂಡುಬಂದಿಲ್ಲ ಎನ್ನುವುದು ಅವರ ಅಸಮಾಧಾನವಾಗಿದೆ. ಕನಿಷ್ಠವಾಗಿ ವೇಗ ನಿಯಂತ್ರಣ ಹಂಪ್‌ಗಳನ್ನು ನಿರ್ಮಿಸುವುದು, ಬ್ಯಾರಿಕೇಡ್‌ಗಳನ್ನು ಅಳವಡಿಸುವುದು ಹಾಗೂ ಎಚ್ಚರಿಕೆ ಫಲಕಗಳನ್ನು ಸ್ಥಾಪಿಸುವುದರಿಂದ ಅಪಘಾತಗಳನ್ನು ಕಡಿಮೆ ಮಾಡಬಹುದೆಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಹೀಗಾಗಿ ನಾಲ್ಕು ರಸ್ತೆಗಳು ಸೇರುವ ಈ ಪ್ರಮುಖ ವೃತ್ತದಲ್ಲಿ ಸಂಭವಿಸಬಹುದಾದ ಭಾರಿ ಅನಾಹುತಗಳನ್ನು ತಪ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳುವುದು ಅತ್ಯಗತ್ಯವಾಗಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

RIPPONPETE | Collision between car and lorry at Vinayak Circle - Car damaged

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close