SUDDILIVE || SAGARA
ರೈಲಿಗೆ ತಲೆಕೊಟ್ಟು ಯುವಕ ಆತ್ಮ*ಹತ್ಯೆ-Young man commits suicide by jumping in front of train
ಸಾಗರ ನಗರದ ಯುವಕನೋರ್ವ ರೈಲು ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ ದುರ್ದೈವಿಯನ್ನು ಸ್ಥಳಿಯ ನಿವಾಸಿ ನಿತಿನ್ (26) ಎಂದು ಗುರುತಿಸಲಾಗಿದೆ.
ಲಭ್ಯವಿರುವ ಮಾಹಿತಿಯಂತೆ, ಮೃತ ನಿತಿನ್ ಸಾಗರದ ದಿನಸಿ ವರ್ತಕರಾದ ಆರ್.ಕೆ. ನಾಗರಾಜ್ ಅವರ ಪುತ್ರನಾಗಿದ್ದಾರೆ. ಇಂದು ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಮೈಸೂರಿನಿಂದ ತಾಳಗುಪ್ಪಕ್ಕೆ ತೆರಳುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Young man commits suicide by jumping in front of train

