SUDDILIVE || SHIVAMOGGA
ಚನ್ನಹಳ್ಳಿ ಬಳಿ ಕ್ರೇಟಾ ಮತ್ತು ಓಮಿನಿ ನಡುವೆ ಅಪಘಾತ-ಏಳು ಮಂದಿಗೆ ಗಾಯ- Accident between Creta and Omni near Channahalli - Seven injured
ಕ್ರೇಟಾ ಕಾರು ಹಾಗೂ ಓಮಿನಿ ವಾಹನದ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕು ಆಯನೂರು ಹಾಗೂ ಚನ್ನಹಳ್ಳಿ ಮಧ್ಯೆ ಸಾಗರ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಘಟನೆ ಸಂಭವಿಸಿದೆ.
ಸಾಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕ್ರೇಟಾ ಕಾರು ಹಾಗೂ ಶಿವಮೊಗ್ಗದಿಂದ ಆಯನೂರು ಕಡೆಗೆ ಹೋಗುತ್ತಿದ್ದ ಓಮಿನಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಓಮಿನಿ ವಾಹನದಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತವಾದ ತಕ್ಷಣ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ವಾಹನದಿಂದ ಹೊರಗೆ ಕರೆತಂದು ಆಸ್ಪತ್ರೆಗೆ ರವಾನಿಸಲು ನೆರವಾದರು.
ಶಿವಮೊಗ್ಗದಿಂದ ಸಾಗರದ ಕಡೆಗೆ ಪ್ರಯಾಣಿಸುತ್ತಿದ್ದ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಘಟನಾ ಸ್ಥಳದಲ್ಲಿ ವಾಹನ ನಿಲ್ಲಿಸಿ ಗಾಯಾಳುಗಳ ನೆರವಿಗೆ ಧಾವಿಸಿದರು. ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು.
ಪ್ರಕರಣದಲ್ಲಿ ಕುಂಸಿ ಠಾಣೆ ಪೊಲೀಸರು ತಮ್ಮ ಜೀಪ್‌ನಲ್ಲಿಯೇ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ ಕರ್ತವ್ಯ ಮೆರೆದಿದ್ದಾರೆ.
Accident between Creta and Omni near Channahalli - Seven injured

