SUDDILIVE || SHIVAMOGGA
ಏ.8 ರಿಂದ 15 ರವರೆಗೆ ಓಡಾಡುವ ರೈಲುಪ್ರಯಾಣಿಕರ ಗಮನಕ್ಕೆ- Attention to train passengers travelling from 8th to 15th April
ರೈಲು ಸೇವೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಬೆಂಗಳೂರು ವಿಭಾಗದ ಮಲ್ಲಸಂದ್ರ ಮತ್ತು ಗುಬ್ಬಿ ನಿಲ್ದಾಣಗಳ ನಡುವೆ ಇರುವ ಲೆವೆಲ್ ಕ್ರಾಸಿಂಗ್ (LC No. 50) ಕಾಮಗಾರಿಯ ಹಿನ್ನೆಲೆಯಲ್ಲಿ, ಏ.8 ರಿಂದ 15 ರವರೆಗೆ ಓಡಾಡುವ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ.
ಅದರಲ್ಲಿ ಪ್ರಮುಖವಾಗಿ, ತಾಳಗುಪ್ಪ, ಸಾಗರ ಮತ್ತು ಶಿವಮೊಗ್ಗದಿಂದ ಹೊರಡುವ ಹಾಗೂ ಬೆಂಗಳೂರಿನಿಂದ ಶಿವಮೊಗ್ಗಮೂಲಕ ತಾಳಗುಪ್ಪಕ್ಕೆ ಓಡಾಡುವ ರೈಲುಗಳ ಸಮಯದಲ್ಲಿ ವ್ಯತ್ಯಯವಾಗಲಿದೆ.
II. ರೈಲುಗಳ ಸಂಚಾರ ಭಾಗಶಃ ರದ್ದು:
1. ಏಪ್ರಿಲ್ 08, 11, 12 ಮತ್ತು 15 ರಂದು ರೈಲು ಸಂಖ್ಯೆ 20652 ತಾಳಗುಪ್ಪ–ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಅರಸೀಕೆರೆ ಮತ್ತು ಬೆಂಗಳೂರು ನಡುವೆ ರದ್ದಾಗಲಿದೆ. ಈ ರೈಲು ಅರಸೀಕೆರೆಯಲ್ಲಿ ತನ್ನ ಪ್ರಯಾಣ ಮುಕ್ತಾಯಗೊಳಿಸಲಿದೆ.
III. ರೈಲುಗಳ ಮಾರ್ಗ ಬದಲಾವಣೆ:
ಏಪ್ರಿಲ್ 08 ಮತ್ತು ಏಪ್ರಿಲ್ 15, 2026 ರಂದು ಹೊರಡುವ ರೈಲು ಸಂಖ್ಯೆ 20689 ಯಶವಂತಪುರ - ಶಿವಮೊಗ್ಗ ಟೌನ್ ಡೈಲಿ ಎಕ್ಸ್‌ಪ್ರೆಸ್ ಚಿಕ್ಕಬಾಣಾವರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ತುಮಕೂರು ಮತ್ತು ತಿಪಟೂರಿನಲ್ಲಿ ನಿಲುಗಡೆ ಇರುವುದಿಲ್ಲ.
IV. ರೈಲುಗಳ ನಿಯಂತ್ರಣ:
ಏಪ್ರಿಲ್ 11 ಮತ್ತು 12 ರಂದು ತೆರಳುವ ರೈಲು ಸಂಖ್ಯೆ 20689 ಯಶವಂತಪುರ– ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.
Attention to train passengers travelling from 8th to 15th April
