SUDDILIVE || SHIVAMOGGA
ಕಾಲೇಜಿಗೆ ಹೋಗುವ ಯುವತಿಗೆ ರೋಡ್ ರೋಮಿಯೋವಿನ ಕಾಟ-College-going young woman faces the threat of Road Romeo
ಕಾಲೇಜಿಗೆ ಹೋಗುವಾಗ ಹಿಂಬಾಲಿಸಿ, ಚುಡಾಯಿಸಿ ಮದುವೆ ಆಗುವಂತೆ ಬಲವಂತಪಡಿಸಿ ಜೀವ ಬೆದರಿಕೆ ಹಾಕುತ್ತಿದ್ದ ಯುವಕನ ವಿರುದ್ಧ ಯುವತಿ ದೂರು ನೀಡಿದ್ದಾರೆ.
ಶಿವಮೊಗ್ಗದಲ್ಲಿ ಪದವಿ ವಿದ್ಯಾರ್ಥಿನಿಯಾಗಿರುವ 19 ವರ್ಷದ ಯುವತಿಯನ್ನ ಆರೋಪಿಯು ಕಳೆದ ನಾಲ್ಕು ತಿಂಗಳಿನಿಂದ ನಿರಂತರವಾಗಿ ಹಿಂಬಾಲಿಸುತ್ತಿದ್ದ. ಕಾಲೇಜಿಗೆ ಹೋದಾಗ ಅಲ್ಲಿಯೂ ಬಂದು ತೊಂದರೆ ನೀಡುತ್ತಿದ್ದ. ರಾತ್ರಿ ಸಮಯದಲ್ಲಿ ಯುವತಿಯ ಮನೆಯ ಕಿಟಕಿ ಹಾಗೂ ಬಾಗಿಲು ತಟ್ಟಿ ಕಿರುಕುಳ ನೀಡುತ್ತಿದ್ದ. ಮದುವೆಯಾಗುವಂತೆ ಒತ್ತಾಯಿಸಿ, ನಿರಾಕರಿಸಿದರೆ ಕೊಲೆ ಮಾಡುವುದಾಗಿ ಅವಾಚ್ಯ ಪದಗಳಿಂದ ಬೈದು ಜೀವ ಬೆದರಿಕೆ ಹಾಕುತ್ತಿದ್ದನು ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.
ಕೆಲ ದಿನದ ಹಿಂದೆ ಆರೋಪಿಯು, ಯುವತಿಯನ್ನು ಎಳೆದಾಡಿ ಹಲ್ಲೆ ನಡೆಸಿದ್ದ ಎಂದು ಆರೋಪಿಸಲಾಗಿದೆ. ಈ ವೇಳೆ ಯುವತಿಯ ಸಂಬಂಧಿಕರು ಆಕೆಯನ್ನು ರಕ್ಷಿಸಿ ಮನೆಗೆ ಕರೆದೊಯ್ದಿದ್ದಾರೆ. ಘಟನೆ ಸಂಬಂಧ ಯುವತಿಯು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
College-going young woman faces the threat of Road Romeo
