ಹುಂಚದಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಮನೆ ಭಸ್ಮ, ಅಘಾತಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು-Fire accident in Huncha: House gutted in an instant, traumatized woman admitted to hospital

SUDDILIVE || RIPPONPETE

ಹುಂಚದಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಮನೆ ಭಸ್ಮ, ಅಘಾತಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು-Fire accident in Huncha: House gutted in an instant, traumatized woman admitted to hospital 

Fire, Huncha
    

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡ ಬಡ ಕುಟುಂಬವೊಂದನ್ನು ಸಂಕಷ್ಟಕ್ಕೆ ದೂಡಿದೆ.

ಹುಂಚ ಗ್ರಾಮದ ಮಠದಜಡ್ಡು ಸಮೀಪದಲ್ಲಿರುವ ಸುಮಿತ್ರಾ ಎಂಬವರ ಮನೆಯಲ್ಲಿ ಭಾನುವಾರ ಏಕಾಏಕಿ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣಗಳಲ್ಲಿ ಭಾರೀ ಅಗ್ನಿಯಾಗಿ ವ್ಯಾಪಿಸಿ, ಮನೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.

ಘಟನೆಯ ವೇಳೆಯಲ್ಲಿ ಮನೆಯಲ್ಲಿ ಇದ್ದವರು ತಕ್ಷಣ ಹೊರಗೆ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೂ ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಎಲ್ಲಾ ಗೃಹೋಪಯೋಗಿ ವಸ್ತುಗಳು, ದಾಖಲೆಗಳು ಸುಟ್ಟು ಭಸ್ಮವಾಗಿವೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ತಕ್ಷಣ ಸ್ಪಂದಿಸಿ ನೀರು ಮತ್ತು ಇತರ ಸೌಲಭ್ಯಗಳಿಂದ ಬೆಂಕಿ ನಂದಿಸಲು ಹರಸಾಹಸ ಪಟ್ಟರು.

ಆದರೆ ಅಗ್ನಿಶಾಮಕ ದಳ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸದಿರುವುದಕ್ಕೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಳಿಕ ರಿಪ್ಪನ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪರಿಸ್ಥಿತಿಯನ್ನು ಅವಲೋಕಿಸಿದರು.

ಈ ಘಟನೆದಿಂದ ಮಾನಸಿಕವಾಗಿ ತೀವ್ರ ಆಘಾತಕ್ಕೊಳಗಾದ ಮನೆಯ ಮಾಲಕಿ ಸುಮಿತ್ರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಭಾಗ್ಯವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವೆಂಬುದು ಸಮಾಧಾನಕರ ಸಂಗತಿ.

ಇನ್ನು ಬೆಂಕಿಗೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಇತರ ಕಾರಣಗಳ ಬಗ್ಗೆ ಶಂಕೆ ವ್ಯಕ್ತವಾಗುತ್ತಿದ್ದು, ಸಂಬಂಧಿತ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Fire accident in Huncha: House gutted in an instant, traumatized woman admitted to hospital

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close